ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆ

Published : Jun 16, 2025, 06:38 AM IST
hc mahadevappa

ಸಾರಾಂಶ

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

  ಕಲಬುರಗಿ :  ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಸೆಪ್ಟೆಂಬರ್ ಬಳಿಕ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಎಂಎಲ್‌ಸಿ ಎಚ್.ವಿಶ್ವನಾಥ್ ಹೇಳಿಕೆಗೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿ, ವಿಶ್ವನಾಥ್ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್ ಯಾವಾಗ ಆ ರೀತಿ ಹೇಳಿದ್ರೋ ಗೊತ್ತಿಲ್ಲ. ಅಂತಹ ಪ್ರಸ್ತಾವನೆ ಇಲ್ಲ. ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಅವರಿದ್ದು, ಅವರೇ ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ನೇರ ಹೊಣೆ ಎನ್ನುವ ವಿಜಯೇಂದ್ರ ಹೇಳಿಕೆ ತುಂಬಾ ಬಾಲಿಷ. ಆ ದುರಂತ ಆಗಬಾರದಿತ್ತು, ಆದರೆ ಆಗಿದೆ. ಅದಕ್ಕೆ ವಿಷಾದವಿದೆ. ದುರ್ಘಟನೆಯಲ್ಲಿನ ಲೋಪ ಕಂಡು ಹಿಡಿಯಲು ತನಿಖೆ ನಡೆಯುತ್ತಿದೆ. ಇದರಲ್ಲಿ ರಾಜಕೀಯ ಬೆರೆಸುವುದು ಮೂರ್ಖತನ. ಈ ಥರ ಘಟನೆ ಉತ್ತರ ಪ್ರದೇಶ ಸೇರಿ ಬೇರೆ ಬೇರೆ ಕಡೆ ಸಹ ನಡೆದಿವೆ. ಗುಜರಾತ್‌ನಲ್ಲಿ ವಿಮಾನ ದುರಂತ ಆಯ್ತು. ನಾವು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೇಳಿದ್ದಿವಾ?. ಇಂತದ್ದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿಗೆ ಕಿವಿಮಾತು ಹೇಳಿದರು.

ನವೆಂಬರ್‌ ವೇಳೆಗೆ ಸಿಎಂ ಕುರ್ಚಿಗಾಗಿ ಸಿದ್ದು, ಡಿಕೆಶಿ ಮಧ್ಯೆ ಫೈಟ್: ರೇಣುಕಾಚಾರ್ಯ

ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಮಧ್ಯೆ ಕಲಹ ನಡೆಯುವುದು ಗ್ಯಾರಂಟಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಆಪ್ತರು ಸಿಎಂ ಕುರ್ಚಿ ಖಾಲಿ ಇಲ್ಲ ಎನ್ನುತ್ತಿದ್ದಾರೆ. ಆದರೆ, ಈಗಾಗಲೇ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ ಎಂದರು. 

ಮುಖ್ಯಮಂತ್ರಿ ಕುರ್ಚಿ ಬಿಟ್ಟು ಕೊಡುತ್ತಾರೋ, ಇಲ್ಲವೋ ಅದು ಕಾಂಗ್ರೆಸ್‌ ಆಂತರಿಕ ವಿಚಾರ. ಆದರೆ, ಬೀದಿಜಗಳ, ಸಂಘರ್ಷ ಆಗೋದು ಗ್ಯಾರಂಟಿ ಎಂದು ಹೇಳಿದರು 

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ಜನತೆ ಶಾಪ ಹಾಕುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಎಂಬುದು ರಾಹುಲ್ ಗಾಂಧಿ ಕೃಪಾಪೋಷಿತ ಮಂಡಳಿಯಾಗಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ಭ್ರಷ್ಟ, ಕೊಲೆಗಡುಕ ಸರ್ಕಾರವಾಗಿದೆ ಎಂದು ಟೀಕಿಸಿದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ