ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ತಂದೆ ಇಂಗಿತ, ಕೋಲಾರದಿಂದ ಹಿಂದೆ ಸರಿದರೆ ಪಕ್ಷಕ್ಕೆ ಹಿನ್ನಡೆ ಆಗಲಿದೆ, ಹೈಕಮಾಂಡ್‌ನಿಂದ ವರುಣದಲ್ಲಿ ಸ್ಪರ್ಧಿಸುವಂತೆ ಸಲಹೆ, ಇಂದಿನ ಸ್ಥಿತಿಯಲ್ಲಿ ಕೋಲಾರವನ್ನೂ ಬಿಡುವಂತಿಲ್ಲ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು(ಮಾ.25): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರ ಮತ್ತು ವರುಣ ಎರಡೂ ಕ್ಷೇತ್ರದಲ್ಲೂ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೈಕಮಾಂಡ್ ಕೋಲಾರ ಬೇಡ ವರುಣದಲ್ಲಿ ಸ್ಪರ್ಧಿಸಿ ಅಂತ ಹೇಳಿತ್ತು. ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್‌ಗೆ ಹಿನ್ನಡೆ ಆಗುತ್ತೆ ಎಂದು ಅಲ್ಲಿನ ನಾಯಕರು ಹೇಳಿದ್ದಾರೆ. ಇಂದಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರವನ್ನು ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣವನ್ನೂ ಬಿಡಲು ಆಗಲ್ಲ. ಹೀಗಾಗಿ, ಸಿದ್ದರಾಮಯ್ಯ ಅವರು ಕೋಲಾರ ಮತ್ತು ವರುಣ ಎರಡು ಕ್ಷೇತ್ರದಲ್ಲೂ ಸ್ಪರ್ಧಿಸುವ ಇಂಗಿತದಲ್ಲಿದ್ದಾರೆ ಎಂದು ಹೇಳಿದರು.
undefined
ಬಾಯಿಗೆ ಬಂದಂತೆ ಮಾತನಾಡುವ ಪ್ರವೃತ್ತಿಗೆ ಎಚ್ಚರಿಕೆಯ ಗಂಟೆ: ಪ್ರತಾಪ್ ಸಿಂಹ
ವರುಣ ಒಂದರಲ್ಲಿ ನಿಂತುಕೊಳ್ಳಿ ಅಂತ ನಾನು ಮೊದಲು ಸಲಹೆ ಕೊಟ್ಟಿದ್ದೆ. ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ನಿಂತರೂ ಅವರ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ವಿರುದ್ಧ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಎಲ್ಲಿ, ಯಾವಾಗ ನಿಂತರೂ ಶತ್ರುಗಳು ಒಂದಾಗುತ್ತಾರೆ. ಇದಕ್ಕೆಲ್ಲ ಹೆದರೋಕೆ ಆಗಲ್ಲ. ಸಿದ್ದರಾಮಯ್ಯ ಮಾಸ್ ಲೀಡರ್. ಆಕಸ್ಮಾತ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯದ ಪರ ಕೆಲಸ ಮಾಡುತ್ತಾರೆ. ಇದನ್ನು ಬಲಪಂಥೀಯರಿಗೆ ಸಹಿಸಲು ಆಗಲ್ಲ ಎಂದು ಅವರು ಕುಟುಕಿದರು.