ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಬೇಡವೆಂದು ಹೈಕಮಾಂಡ್ ಸೂಚಿಸಿದ್ದಾರೆ. ಹೀಗಾಗಿ ವರುಣಾ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ.
ಮೈಸೂರು (ಮಾ.19): ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಸ್ಪರ್ಧೆ ಮಾಡುವುದು ಬೇಡವೆಂದು ಹೈಕಮಾಂಡ್ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವನ್ನು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟಿ. ನರಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ 2-3 ದಿನಗಳಲ್ಲಿ ನಮ್ಮ ತಂದೆ (ಸಿದ್ದರಾಮಯ್ಯ) ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ತಮ್ಮ ನಿರ್ಧಾರ ತಿಳಿಸಿಲಿದ್ದಾರೆ. ಹೈ ಕಮಾಂಡ್ ಕೋಲಾರದಿಂದ ಕ್ಷೇತ್ರದಿಂದ ಸ್ಪರ್ಧೇ ಮಾಡದಂತೆ ಸಲಹೆ ನೀಡಿದ್ದಾರೆ. ಹೀಗಾಗಿ, ಹೈಕಮಾಂಡ್ ಮಾತು ಕೇಳಬೇಕಾಗುತ್ತದೆ ಎಂದಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಕೋಲಾರದಲ್ಲಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಹೈಕಮಾಂಡ್ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಇದರ ಬಗ್ಗೆ ತಂದೆ ಅವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ವರುಣಾ ಬಿಟ್ಟು, ಪಾಕಿಸ್ತಾನ, ಅಪಘಾನಿಸ್ಥಾನಕ್ಕೆ ಹೋಗಿ ಸ್ಪರ್ಧಿಸಲಿ: ಆರ್. ಅಶೋಕ್
ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಬಂದರೆ ಬಿಟ್ಟುಕೊಡುವೆ: ಕೋಲಾರದಲ್ಲಿ ನಾನು ಸಹ 2 ಬಾರಿ ಆತಂರಿಕ ಸರ್ವೆ ಮಾಡಿಸಿದ್ದೇನೆ. ಸಿದ್ದರಾಮಯ್ಯ ಪರವಾಗಿ ಸರ್ವೆ ರಿಸಲ್ಟ್ ಬಂದಿದೆ. ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ಅವರಿಗೆ ಬಹು ಕ್ಷೇತ್ರ ಆಯ್ಕೆಗೆ ಅವಕಾಶ ಇರುವುದೇ ತೊಂದರೆ ಆಗಿರೋದು. ಒಂದು ವೇಳೆ ಸಿದ್ದರಾಮಯ್ಯ ವರುಣ ಕ್ಷೇತ್ರಕ್ಕೆ ಬಂದರೆ ನಾನು ಬಿಟ್ಟು ಕೊಡುವೆ. ನಾನು ಬೇರೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಲ್ಲ. ಬೇರೆ ಕ್ಷೇತ್ರವಾದರೂ ಅಲ್ಲಿನ ಸ್ಥಳೀಯ ಅಭ್ಯರ್ಥಿಗಳೇ ಕೆಲಸ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.
ವರುಣಾ ಕ್ಷೇತ್ರದ ಶಿಷ್ಟಾಚಾರ ಉಲ್ಲಂಘನೆ: ವರುಣ ಕ್ಷೇತ್ರದಲ್ಲಿ ಕಾಮಗಾರಿಗೆ ಕೆ.ಆರ್.ಕ್ಷೇತ್ರದಲ್ಲಿ ಶಂಕುಸ್ಥಾಪನೆ ಮಾಡಲಾಗಿದೆ. ಶಿಷ್ಟಾಚಾರ ಉಲ್ಲಂಘನೆ ಮಾಡಿ ಮನೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಲಲಿತಾದ್ರಿಪುರ ಸರ್ವೇ ನಂ.15, 16, 17 ಮತ್ತು 18ರಲ್ಲಿ 163 ಕೋಟಿ ರೂ.ವೆಚ್ಚದಲ್ಲಿ 1,450 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಲಲಿತಾದ್ರಿಪುರದ ಕಾಮಗಾರಿಗೆ ದಸರಾ ವಸ್ತು ಪ್ರದರ್ಶನದಲ್ಲಿ ಶಂಕುಸ್ಥಾಪನೆ ಮಾಡಲಾಗುತ್ತಿದೆ. ವರುಣದಲ್ಲಿ ಮನೆ ನಿರ್ಮಾಣ ಆಗುವುದರಿಂದ ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಬೇಕಿತ್ತು. ಆದರೆ ಕೆ.ಆರ್.ಕ್ಷೇತ್ರದ ಶಾಸಕ ರಾಮದಾಸ್ ಆತುರ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.
Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್ ಟಿಕೆಟ್ ವಾರ್..?
ಚುನಾವಣೆಗಾಗಿ ಬಿಜೆಪಿ ಸುಳ್ಳು ಹೇಳಿಕೆ: ಬಿಜೆಪಿ ನಾಯಕರು ಎಲೆಕ್ಷನ್‌ಗಾಗಿ ಜನರಿಗೆ ಸುಳ್ಳು ಭರವಸೆ ನೀಡಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. 2021-22ರಲ್ಲಿ ಭೂ ಸ್ವಾಧೀನ ಆಗಿತ್ತು. ಭೂ ಪರಿಹಾರದ ವಿಚಾರದಲ್ಲಿ ತಕರಾರುಗಳು ಇವೆ. ನ್ಯಾಯಾಲಯ ತಡೆಯಾಜ್ಞೆ ಕೊಟ್ಟಿದೆ. 22ರ ಜೂನ್‌ನಲ್ಲಿ ನಡೆದ ಮುಡಾ ಸಭೆಯಲ್ಲಿ ಸದರಿ ಜಾಗವನ್ನು ಪಾಲಿಕೆಗೆ ಹಸ್ತಾಂತರ ಮಾಡಲು ತೀರ್ಮಾನಿಸಲಾಗಿತ್ತು. ತಕರಾರು ತೆಗೆದವರಿಗೆ ಭೂ ಪರಿಹಾರ ಕೊಟ್ಟು ಮುಂದುವರಿಯಬೇಕಿತ್ತು. ಕೆ.ಆರ್.ಕ್ಷೇತ್ರದ ಫಲಾನುಭವಿಗಳಿಗೆ ಮಾತ್ರ ಆಯ್ಕೆ ಮಾಡಲಾಗಿದೆ. ವರುಣದವರನ್ನೂ ಆಯ್ಕೆ ಮಾಡಲಾಗಿತ್ತು. ಈ ಬಗ್ಗೆ ನಾನು ಪ್ರತಿಭಟನೆ ಮಾಡಿದ ಕಾರಣಕ್ಕೆ ಶಂಕುಸ್ಥಾಪನೆ ಜಾಗ ಬದಲಾವಣೆ ಮಾಡಿಕೊಂಡಿದ್ದಾರೆ.
ಇಬ್ಬರು ಮಾತ್ರ ಟೆಂಡರ್‌ನಲ್ಲಿ ಭಾಗವಹಿಸಿದ್ದರು. ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಮುಂದೆಯೂ ಕಾಮಗಾರಿ ತಾರ್ಕಿಕ ಅಂತ್ಯಕ್ಕೆ ಹೋಗೋದಿಲ್ಲ ಎಂದು ಹೇಳಿದರು.