Breaking ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ, ಎರಡು ಕಡೆ ನಿಲ್ಲುವ ಇಂಗಿತ!

By Gowthami K  |  First Published Mar 24, 2023, 2:07 PM IST

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಚಿತ್ರದುರ್ಗದಲ್ಲಿ  ಸಿದ್ಧರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.


ಚಿತ್ರದುರ್ಗ (ಮಾ.24): ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಚಿತ್ರದುರ್ಗದಲ್ಲಿ  ಸಿದ್ಧರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ. ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ. 25 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ ಎಂದು ಹೇಳಿದ್ದಾರೆ. ಎಲ್ಲಾ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದೇನೆಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಹಲವು ದಿನಗಳಿಂದ ಇದ್ದ ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟದ ಕುತೂಹಲಕ್ಕೆ  ಕೊನೆಗೂ ತೆರೆ ಬಿದ್ದಂತಾಗಿದೆ. ಆದರೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಫರ್ಧಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದು ಸಿದ್ದು ಕಣ್ಣಿಟ್ಟಿರುವ ಎರಡನೇ ಕ್ಷೇತ್ರ ಯಾವುದು ಎಂಬುದು ಈಗ ಇರುವ ಕುತೂಹಲದ ಪ್ರಶ್ನೆಯಾಗಿದೆ.

Latest Videos

undefined

ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಹಿತದೃಷ್ಟಿಯಿಂದ ವರುಣಾದಲ್ಲಿ ಸ್ಫರ್ಧಿಸುವ ಬಗ್ಗೆ ಈ ಮೊದಲು ಸಿದ್ದರಾಮಯ್ಯ ಚಿಂತಿತರಾಗಿದ್ದರು. ಆದರೆ ಇದೀಗ ಪಕ್ಷದ ಮುಖಂಡರ ಸಲಹೆ ಮೇರೆಗೆ ವರುಣಾ ಕ್ಷೇತ್ರವನ್ನು ಒಪ್ಪಿಕೊಂಡಿದ್ದಾರೆ.

ಜಿಎಸ್‌ ಪಾಟೀಲ ಶಾಸಕರಾಗಬೇಕು, ಸಿದ್ರಾಮಯ್ಯ ಸಿಎಂ ಆಗಬೇಕು: ಅಂಬೇಗಾಲಲ್ಲಿ ಕಾಲಕಾಲೇಶ್ವರ ಬೆಟ್ಟವೇರಿದ ಯುವಕ!

ಇತ್ತ ಸಿದ್ದರಾಮಯ್ಯ ಅವರ ವಿರುದ್ಧ ಸಮರ್ಥ ನಾಯಕನನ್ನು ನಿಲ್ಲಿಸುವ ಬಗ್ಗೆ  ವಿರೋಧ ಪಕ್ಷಗಳು ಕೂಡ ರಣತಂತ್ರ ರೂಪಿಸುತ್ತಿದೆ. ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯರನ್ನು ಎದುರಿಸಲು ಪ್ರಭಾವಿ ಲಿಂಗಾಯತ ಮುಖಂಡರೇ ಬೇಕು ಎನ್ನುವುದು ಬಿಜೆಪಿ ಹೈಕಮಾಂಡ್ ವಾದ. ಹೀಗಾಗಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮತ್ತು ಸಚಿವ ಸೋಮಣ್ಣ ಅವರು ಮುಂಚೂಣಿಯಲ್ಲಿದ್ದಾರೆ. ಇಂದು ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ  ಸಿದ್ದರಾಮಯ್ಯ ಅವರ ವಿರುದ್ಧ ಯಾವ ನಾಯಕ ನಿಂತರೆ ಒಳ್ಳೆಯದು ಎಂಬ  ಬಗ್ಗೆ ಗುಪ್ತ ಚರ್ಚೆಗಳು ನಡೆದಿದೆ ಎಂದು ಹೇಳಲಾಗುತ್ತಿದೆ.

Karnataka election 2023: ದಲಿತರ ಪಾಲಿಗೆ ಕಾಂಗ್ರೆಸ್‌ ಸುಡುವ ಮನೆ ಇದ್ದಂತೆ: ನಾರಾ​ಯಣಸ್ವಾಮಿ 

ಇನ್ನು ವಿಜಯೇಂದ್ರ ಕೂಡ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ತೀರ್ಮಾನ ಕೇಂದ್ರ ನಾಯಕರಿಗೆ ಬಿಟ್ಟಿದ್ದು, ಈಗಾಗಲೇ ನಾನು ಶಿಕಾರಿಪುರ ಕ್ಷೇತ್ರದಲ್ಲಿ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ಶೀಘ್ರದಲ್ಲೇ ಶಿಕಾರಿಪುರದಲ್ಲಿ ಮತ್ತೊಂದು ಸುತ್ತಿನ ಪ್ರವಾಸ ಆರಂಭಿಸುತ್ತೇನೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

click me!