ದಿಲ್ಲಿಯಿಂದ ಸಂದೇಶ ಬಂದಿದೆ, 5 ವರ್ಷವೂ ಸಿದ್ದರಾಮಯ್ಯ ಸಿಎಂ: ಡಿ.ಕೆ. ಸುರೇಶ್

By Kannadaprabha News  |  First Published Sep 5, 2024, 6:04 AM IST

ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆದರೆ ಕೇಳುವುದರಲ್ಲಿ ತಪ್ಪಿಲ್ಲ. ಬಿಜೆಪಿ-ಜೆಡಿಎಸ್ ಅವರು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಸಿಗಬೇಕು ಎಂಬುದು ಬಿಟ್ಟು ಬೇರೇನೂ ಇಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್


ಬೆಂಗಳೂರು(ಸೆ.05):  ಐದು ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಎಐಸಿಸಿ ಅಧ್ಯಕ್ಷರು ಸೇರಿದಂತೆ ದೆಹಲಿ ಹೈಕಮಾಂಡ್ ಸ್ಪಷ್ಟ ಸಂದೇಶ ಕಳುಹಿಸಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕರು ಕೂಡ ಇದನ್ನೇ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರೇ ಐದು ವರ್ಷವೂ ಮುಖ್ಯಮಂತ್ರಿ' ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿ, 'ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆದರೆ ಕೇಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು. 

Tap to resize

Latest Videos

ಮುಡಾದಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಸರ್ಕಾರ ಕೆಡವಲು ಬಿಜೆಪಿ ಷಡ್ಯಂತ್ರ : ಡಿಕೆ ಸುರೇಶ್

ಬಿಜೆಪಿ-ಜೆಡಿಎಸ್ ಅವರು ಕೂಡ ಮುಖ್ಯ ಮಂತ್ರಿ ಹುದ್ದೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಸಿಗಬೇಕು ಎಂಬುದು ಬಿಟ್ಟು ಬೇರೇನೂ ಇಲ್ಲ' ಎಂದು ಹೇಳಿದರು.

click me!