ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ನೀಡುವಂತೆ ಖರ್ಗೆ ಮುಂದೆ ಸಿದ್ದರಾಮಯ್ಯ ಬಿಗಿ ಪಟ್ಟು

By Gowthami K  |  First Published Apr 18, 2023, 11:37 AM IST

ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ನೀಡಬೇಕೆಂದು ಸಿದ್ದರಾಮಯ್ಯ ಸೇರಿ ಹಲವರು ಪಟ್ಟು ಹಿಡಿದಿದ್ದಾರೆ.  ಖರ್ಗೆ ನಿವಾಸದಲ್ಲಿ ಈ ಬಗ್ಗೆ ಮಹತ್ವದ ಸಭೆ ನಡೆದಿದೆ.


ಬೆಂಗಳೂರು (ಏ.18): ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಕಾವು ಜೋರಾಗಿದೆ. ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿಗೆ ಮೂರನೇ ಪಟ್ಟಿಯಲ್ಲೂ ಟಿಕೆಟ್ ಖಚಿತಗೊಂಡಿಲ್ಲ. ಇತ್ತ ಕಾಂಗ್ರೆಸ್ ನಾಯಕರು ಟಿಕೆಟ್ ಭರವಸೆಯನ್ನೂ ನೀಡಿಲ್ಲ. ಇದರಿಂದ ಬೇಸತ್ತಿರುವ ಅಖಂಡ ಶ್ರೀನಿವಾಸಮೂರ್ತಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರಲು ಮಾತುಕತೆಗಳು ನಡೆದಿದೆ. ಶೀಘ್ರದಲ್ಲೇ ಅಖಂಡ ಶ್ರೀನಿವಾಸಮೂರ್ತಿ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. 

ಈ ನಡುವೆ ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ   ಹಾಗೂ ರಣದೀಪ್ ಸುರ್ಜೆವಾಲಾ ಬಳಿ  ಅಖಂಡಗೆ ಟಿಕೆಟ್ ನೀಡಬೇಕೆಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.  ಖರ್ಗೆ ನಿವಾಸದಲ್ಲಿ ಈ ಬಗ್ಗೆ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಪುಲಿಕೇಶಿ ನಗರ ಟಿಕೆಟ್  ಅಖಂಡಗೆ ನೀಡುವಂತೆ  ಎಸಿ ಶ್ರೀನಿವಾಸ್, ಜಮೀರ್ ಅಹ್ಮದ್   ಕೂಡ ಒತ್ತಡ ಹೇರುತ್ತಿದ್ದಾರೆ. ತಮ್ಮ ಆಪ್ತರಿಗೆ ಟಿಕೆಟ್ ಕೊಡಬೇಕು ಎಂದು ಜಿ. ಪರಮೇಶ್ವರ್ ಈ ಸಭೆಯಲ್ಲಿ ಒತ್ತಾಯಿಸಿದ್ದಾರೆ.

Tap to resize

Latest Videos

ಇಂದು ಪುಲಕೇಶಿಯನಗರ ಅಭ್ಯರ್ಥಿ ಪೈನಲ್ ಮಾಡಲೇ ಬೇಕಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇದ್ದು, ಬಂಡಾಯ ಅಭ್ಯರ್ಥಿಯಾಗಿ ಅಖಂಡ ಕಣಕ್ಕಿಳಿದಿದ್ದಾರೆ. ಈ ನಡುವೆ ಇವತ್ತೊಂದು ದಿನ ಕಾಯಿರಿ ಎಂದು ಸಿದ್ದರಾಮಯ್ಯ ಮತ್ತು ಜಮೀರ್ ಅವರು ಅಖಂಡಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿನ ಸಭೆ ಬಳಿಕ ಕಾಂಗ್ರೆಸ್ ನಾಲ್ಕನೇ ಪಟ್ಟಿ ರಿಲೀಸ್ ಆಗಲಿದೆ 15 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಬಾಕಿ ಇದೆ.

ಅಖಂಡ ರಾಜೀನಾಮೆಗೆ ಎಐಸಿಸಿ ನಾಯಕರು ಗರಂ:
ಅಖಂಡ  ಶ್ರೀನಿವಾಸಮೂರ್ತಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕಾಗಿ  ಎಐಸಿಸಿ ನಾಯಕರು ಮತ್ತಷ್ಟು ಗರಂ ಆಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ತಮ್ಮನ್ನು ಕೇಳಿಲ್ಲ ಅಂತ ಕೆಲ ನಾಯಕರ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಕೂಡ ಅಖಂಡ ರಾಜೀನಾಮೆ ನೀಡುವಾಗ ತಮ್ಮನ್ನು ಯಾಕೆ ಕೇಳಿಲ್ಲ ಎಂದು ಬೇಸರ ತೋರ್ಪಡಿಸಿದ್ದಾರೆ. ರಾಜೀನಾಮೆ ನೀಡದೇ ಇದ್ದರೆ ಟಿಕೆಟ್ ನೀಡುವ ಬಗ್ಗೆ ಯೋಚಿಸಬಹುದಿತ್ತು ಎಂದು ಎಐಸಿಸಿ ನಾಯಕರು ಚರ್ಚೆ ನಡೆಸಿದ್ದಾರೆ.

ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧಿಸಿದರೆ ಭಯವಿಲ್ಲ: ಚಲುವರಾಯಸ್ವಾಮಿ

ಇನ್ನು ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ,  ಈಗಾಗಲೇ ಈ ಬಗ್ಗೆ ಚರ್ಚೆ ಆಗಿದೆ. ಪುಲಕೇಶಿನಗರದ ಟಿಕೆಟ್  ವಿಚಾರ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಈಗಾಗಲೇ ನಮ್ಮ ಅಭಿಪ್ರಾಯ ಹೈಕಮಾಂಡ್‌ನವರು ಸಂಗ್ರಹ ಮಾಡಿದ್ದಾರೆ. ಎಲ್ಲರೂ ನಮ್ಮ ಅಭಿಪ್ರಾಯ ಕೊಟ್ಟಿದ್ದೇವೆ. ಅಂತಿಮವಾಗಿ ಹೈಕಮಾಂಡ್ ಟಿಕೆಟ್ ಬಗ್ಗೆ ನಿರ್ಧಾರ ಮಾಡುತ್ತೆ ಎಂದಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ ಎದುರು ಸ್ಪರ್ಧಿಸಲು ಸಿದ್ಧ: ಸಂಸದೆ ಸುಮಲತಾ ಅಂಬರೀಶ್‌

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.  ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

click me!