
ಬೆಂಗಳೂರು, (ಮೇ.03): ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ ಘಟನೆ ನಡೆದಿದೆ.
ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
"
ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಟ್ವಿಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ..? ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.