
ಮೈಸೂರು (ಏ.22): ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವ ಆಪತ್ತೂ ಬಂದಿಲ್ಲ. ಸಿಎಂ ಕುರ್ಚಿ ಸುರಕ್ಷಿತವಾಗಿದೆ ಎಂದು ಹೇಳಿರುವ ವಿಧಾನಪರಿಷತ್ ಸದಸ್ಯ ಡಾ। ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಮುಂದೆ ತಂದಿದ್ದಾರೆಂಬ ವಿರೋಧಪಕ್ಷ ನಾಯಕರ ಆರೋಪಕ್ಕೆ ನಗರದಲ್ಲಿ ಸೋಮವಾರ ಪ್ರತಿಕ್ರಿಯಿಸಿ, ಮುಡಾ ಸುಳ್ಳು ಕೇಸ್ ಹಾಕಿದಾಗಲೂ ನಮ್ಮ ಶಾಸಕರು, ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಮುಂದೆ ತಂದಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಮುಡಾ ಕೇಸ್ ಇಡಿ ತನಿಖೆ ಸಂಬಂಧ ಕೋರ್ಟ್ ಆದೇಶ ಕಾಯ್ದಿರಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ಮುಡಾ ಕೇಸ್‌ನಲ್ಲಿ ಏನೂ ಸತ್ಯಾಂಶ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯ ಹೆದರಬೇಕಾದ ಅವಶ್ಯಕತೆ ಇಲ್ಲ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಅಲ್ಲಿ ತೊಂದರೆ ಕೊಡುತ್ತಲೇ ಬಂದಿದ್ದಾರೆ. ನಾವು ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ ಎಂದರು.
ಮುಡಾ ಕೇಸ್ ಸತ್ಯಾಂಶ ಇಲ್ಲ: ಮುಡಾ ಕೇಸ್ ಇಡಿ ತನಿಖೆ ಸಂಬಂಧ ಕೋರ್ಟ್ ಆದೇಶ ಕಾಯ್ದಿರಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ ಅವರು, ಮುಡಾ ಕೇಸ್‌ನಲ್ಲಿ ಏನೂ ಸತ್ಯಾಂಶ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯ ಹೆದರಬೇಕಾದ ಅವಶ್ಯಕತೆ ಇಲ್ಲ. ಇಡಿ ಬೇಕಂತಲೇ ಕಿರುಕುಳ ಕೊಡುತ್ತಿದ್ದಾರೆ. ನಾವು ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ. ಇಡಿ ತನಿಖೆ ಅದರ ಪಾಡಿಗೆ ನಡೆಯುತ್ತೆ, ಸಿದ್ದರಾಮಯ್ಯ ತಮ್ಮ ಕುರ್ಚಿಯಲ್ಲಿ ಮುಂದುವರೆಯುತ್ತಾರೆ. ನಾವು ತಪ್ಪು ಮಾಡಿಲ್ಲ. ಹೀಗಾಗಿ ಹೆದರುವ ಪ್ರಶ್ನೆ ಇಲ್ಲ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಎಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ ಅಲ್ಲಿ ತೊಂದರೆ ಕೊಡುತ್ತಲೇ ಬಂದಿದ್ದಾರೆ ಎಂದರು.
ಸಿಇಟಿ ವೇಳೆ ಜನಿವಾರ ತೆಗೆಸಿದ್ದು ತಪ್ಪು: ಡಿ.ಕೆ.ಶಿವಕುಮಾರ್
ಆಯೋಗವನ್ನು ಕೇಳಬೇಕು: ಜಾತಿ ಗಣತಿ ಮೂಲ ಪ್ರತಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ ಎಂಬ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ಮೂಲ ಪ್ರತಿಯನ್ನು ಹಿಂದುಳಿದ ವರ್ಗಗಳ ಆಯೋಗವನ್ನು ಕೇಳಬೇಕು. ಮೂಲಪ್ರತಿ ಇಲ್ಲದಿದ್ದರೂ ಡೇಟಾ ಕಂಪ್ಯೂಟರ್ ನಲ್ಲಿ ಶೇಖರಿಸಿರಬಹುದು. ಅದಕ್ಕೆ ಸ್ಪಷ್ಟನೆಯನ್ನು ಆಯೋಗದ ಅಂದಿನ ಮುಖ್ಯಸ್ಥರು ನೀಡುತ್ತಾರೆ. ಈ ರೀತಿಯ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು. ಸಿಎಂ ಹಿಂದುಳಿದ ವರ್ಗಕ್ಕೆ ಸೇರಿದ್ದಾರೆ. ಪ್ರಬಲ ವರ್ಗಕ್ಕೆ ಅನ್ಯಾಯ ಮಾಡಿಬಿಡುತ್ತಾರೆ ಎಂಬುದು ಪೂರ್ವಗ್ರಹ ಪೀಡಿತ. ಜಾತಿ ಗಣತಿಯಿಂದ ಅನುಕೂಲ ಆಗುತ್ತೆ. ಯಾರಿಗೂ ಅನ್ಯಾಯ ಆಗುವುದಿಲ್ಲ. ಸಮೀಕ್ಷೆಯಲ್ಲಿ ಜಾತಿ ಗಣತಿ ಒಂದು ಭಾಗ ಮಾತ್ರ. ಪ್ರತಿ ಜಾತಿಗಳ ಸಂಖ್ಯೆ, ಆರ್ಥಿಕ, ಸಾಮಾಜಿಕ, ಔದ್ಯೋಗಿಕ ಸ್ಥಿತಿಗತಿ ತಿಳಿಯಲು ಇದರಿಂದ ಸಾಧ್ಯ. ಇದೆಲ್ಲವನ್ನು ಮಾಡಿ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಲಿಂಗಾಯತರು, ಒಕ್ಕಲಿಗರು ಕೂಡ ಸೇರಿಕೊಳ್ಳುತ್ತಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.