ನನ್ನನ್ನು 1 ದಿನವಾದ್ರೂ ಜೈಲಿಗಟ್ಟಲು ಸಿದ್ದರಾಮಯ್ಯ ಗ್ಯಾಂಗ್‌ ಸಂಚು ಮಾಡಿತ್ತು: ಎಚ್‌ಡಿಕೆ

By Kannadaprabha News  |  First Published Oct 2, 2024, 7:19 AM IST

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. 


ನವದೆಹಲಿ (ಅ.02): ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರ ಜತೆಗೆ ಮಾತನಾಡಿ, ನಾನು ಒಬ್ಬ ಅಧಿಕಾರಿಯ(ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌) ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆ ಬಯಲು ಮಾಡಿದ್ದೆ ಅಷ್ಟೆ. ಆದರೆ ಅವರು ನನ್ನನ್ನು ಜೈಲಿಗೆ ಕಳುಹಿಸುವ ತಿರುಕನ ಕನಸು ಕಾಣುತ್ತಿದ್ದಾರೆ. 

ಅವರು ಎಲ್ಲಿ ಯಾರ ಕಚೇರಿಯಲ್ಲಿ ಕೂತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗಿದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಎಂಬ ಚರ್ಚೆ ಮಾಡಲಾಗಿದೆ ಎಂದು ಕಿಡಿಕಾರಿದರು. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿಗೆ ತನಿಖೆ ಮಾಡುವಂತೆ ಅವಕಾಶ ಕೇಳಿ ಪತ್ರ ಬರೆದು ಒಂದು ಖಾಸಗಿ ಚಾನೆಲ್ ಗೆ ಅದನ್ನು ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಹೇಳಿದರು.

Tap to resize

Latest Videos

undefined

ಆ ಅಧಿಕಾರಿಗೆ ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರಿಗೆ ನೇರ ನಂಟಿದೆ. ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಹೈಕೋರ್ಟ್‌ನಲ್ಲಿ ತನಿಖೆಗೆ ಸ್ಟೇ ತೆಗೆದುಕೊಂಡಿದ್ದಾರೆ. ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದರ ಸಲುವಾಗಿಯೇ ಜಾಮೀನು ತೆಗೆದುಕೊಂಡೆ ಹೊರತು ಅವರ ರೀತಿ ಸ್ಟೇ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ತಪ್ಪೊಪ್ಪಿಕೊಂಡ ಸಿಎಂ ಸಿದ್ದರಾಮಯ್ಯ ಹುದ್ದೆ ಬಿಡಲಿ: ಬಿ.ವೈ.ವಿಜಯೇಂದ್ರ

ಕ್ರಿಮಿನಲ್‌ ಸಿಎಂ ಅಂದ್ರೆ ಏನ್‌ ಮಾಡ್ತಿದ್ರಿ?: ಅಧಿಕಾರಿಗಳು ಮುಖ್ಯಮಂತ್ರಿ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿ ರಜೆ ಇದ್ದರೂ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಪದಲ್ಲಿ ನನ್ನ ಬಗ್ಗೆ ಕೆಟ್ಟ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಕೂಡ ಇಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

click me!