ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮವರಿಂದಲೇ ಸೋಲಬೇಕಾಯ್ತು ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ತಮ್ಮವರು ಯಾರು ಎನ್ನುವುದನ್ನ ಸಿದ್ದು ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.19): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಳ ಒಪ್ಪಂದ ಹಾಗೂ ನಮ್ಮವರಿಂದ ಸೋಲಬೇಕಾಯ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೊತ್ತೊಮ್ಮೆ ಹೇಳಿಕೆ ಕೊಟ್ಟಿದ್ದಾರೆ.
ಸಿದ್ದರಾಮಯ್ಯನವರ ಈ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರನ್ನ ಸೋಲಿಸಲು ಸ್ವಪಕ್ಷದ ನಾಯಕರೇ ಖೆಡ್ಡಾ ತೋಡಿದ್ರಾ ಎನ್ನುವ ಚರ್ಚೆಗಳು ನಡೆದಿವೆ.
undefined
ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಯಾರು ಸೋಲಿಸಿದ್ದಾರೆಂದು ಹೆಸರು ಹೇಳಲಿ ಎಂದಿದ್ದರು.
ಸಿದ್ದರಾಮಯ್ಯನ ಸೋಲಿಸಬೇಕೆಂದು ಒಳ ಒಪ್ಪಂದವಾಗಿತ್ತು: ಜೆಡಿಎಸ್ ಶಾಸಕ ಬಾಂಬ್
ಇದರ ಬೆನ್ನಲ್ಲೇ ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ. 1/2
— Siddaramaiah (@siddaramaiah)