ಅಲ್ಪಸಂಖ್ಯಾತರ ಅಭಿವೃದ್ದಿಗೆ 1000 ಕೋಟಿ ಬಿಡುಗಡೆ ಮಾಡುವ ಮೂಲಕ ಆಡಳಿತದಲ್ಲಿ ಜಾತಿಯತೇ ರಾಜಕಾರಣದ ಲಾಭ ಮಾಡಿಕೊಳ್ಳಲು ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಕೋಲಾರ (ಜ.30): ರಾಜ್ಯದಲ್ಲಿ ಬರಗಾಲ ಬಂದು 6 ತಿಂಗಳು ಕಳೆದರೂ ರೈತರಿಗೆ ಬಿಡಿಗಾಸು ಪರಿಹಾರ ನೀಡಿಲ್ಲ, ರೈತ ವಿರೋಧ ಧೋರಣೆ ಪಾಲನೆ ಮಾಡುತ್ತಿದೆ, ಆದರೆ ಅಲ್ಪಸಂಖ್ಯಾತರ ಅಭಿವೃದ್ದಿಗೆ 1000 ಕೋಟಿ ಬಿಡುಗಡೆ ಮಾಡುವ ಮೂಲಕ ಆಡಳಿತದಲ್ಲಿ ಜಾತಿಯತೇ ರಾಜಕಾರಣದ ಲಾಭ ಮಾಡಿಕೊಳ್ಳಲು ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ರಾಜ್ಯ ಕಾಂಗ್ರೇಸ್ ಸರ್ಕಾರದ ರೈತ ವಿರೋಧ ಜನವಿರೋಧಿ ನೀತಿ ಖಂಡಿಸಿ ಬಂಗಾರಪೇಟೆ ರಸ್ತೆಯ ಅಂಬೇಡ್ಕರ್ ವೃತ್ತದಿಂದ ಮೆಕ್ಕೆ ವೃತ್ತವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಅವರು ಮಾತನಾಡಿ, ಕೇಂದ್ರ ಸರ್ಕಾರ 400 ಕೋಟಿ ರು. ಬಿಡುಗಡೆ ಮಾಡಿದೆ, ಈ ಸಂಬಂಧವಾಗಿ ಜಿಲ್ಲಾಧಿಕಾರಿ ಖಾತೆಯಲ್ಲಿ ಎಷ್ಟು ಅನುದಾನ ಇದೆ, ಎಷ್ಟು ಬಿಡುಗಡೆ ಮಾಡಿದೆ ಎಂದು ಪ್ರಶ್ನಿಸಿದರು.
ಅಲ್ಪಸಂಖ್ಯಾತರ ಓಲೈಕೆ ರೈತರನ್ನು ಕಡೆಗಣಿಸಿ ಟಿಪ್ಪುವನ್ನು ವೈಭವೀಕರಿಸುವ ಮೂಲಕ ಅಲ್ಪಸಂಖ್ಯಾತರನ್ನು ಒಲೈಸಿಕೊಳ್ಳುತ್ತಿದ್ದೀರಿ, ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚತ್ತು ಕಾಳಜಿ ಇಲ್ಲವಾಗಿದೆ. ಸರ್ಕಾರದ 5 ಗ್ಯಾರಂಟಿಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಟೀಕಿಸಿದರು. ಕೋಲಾರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಆಶ್ವಾಸನೆ ನೀಡಿ ಕೆ.ಸಿ.ವ್ಯಾಲಿ ಯೋಜನೆಯಲ್ಲಿ 3 ಭಾರಿ ಸಂಸ್ಕರಣೆ ಮಾಡದೆ ಮೋಸ ಮಾಡಿದೆ. ಕೊಳಚೆ ನೀರು ನೀಡಿ ಭೂಮಿಯನ್ನು ಹಾಳು ಮಾಡಿದೆ, ಈ ಸರ್ಕಾರವನ್ನು ಮನೆಗೆ ಕಳುಹಿಸಬೇಕು, ಅನಿಷ್ಟ ಸರ್ಕಾರಕ್ಕೆ ಧಿಕ್ಕಾರ ಹಾಕಿ, ಎಮ್ಮೆ ಚರ್ಮದ ಸರ್ಕಾರಕ್ಕೆ ಬಾರು ಕೋಲಿನಿಂದ ಬಾರಿಸುವಂತಾಗಬೇಕು ಎಂದು ಕಿಡಿಕಾರಿದರು. ರಾಜ್ಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ, ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕ ವೈ.ಸಂಪಂಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಇದ್ದರು.
ಬೀದರ್ ಸಂಸದ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೀಡಿ: ವಿಜಯೇಂದ್ರಗೆ ಶಾಸಕ ಚವ್ಹಾಣ್ ಸಾಷ್ಟಾಂಗ ನಮಸ್ಕಾರ
ಬುದ್ಧಿಮಾಂದ್ಯ ಮಕ್ಕಳು ದೇವರಿದ್ದಂತೆ: ಬುದ್ಧಿಮಾಂದ್ಯ ಮಕ್ಕಳು ದೇವರಿದ್ದಂತೆ. ಇಂತಹ ಮಕ್ಕಳಿಗೆ ಎಷ್ಟು ಸಹಾಯ ಮಾಡಿದರೂ ಸಾಲದು. ಮಕ್ಕಳನ್ನು ಪಾಲನೆ, ಪೋಷಣೆ ಮಾಡಿ ವಿದ್ಯೆ ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಮಾಜಿ ಸಿಎಂ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಇಜಾರಿ ಲಕಮಾಪುರದಲ್ಲಿ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ 64ನೇ ಜನ್ಮದಿನವನ್ನು ಆಚರಿಸಿಕೊಂಡು ಅವರು ಮಾತನಾಡಿದರು. ಎಲ್ಲ ಅಂಗಾಂಗಳು ಸರಿ ಇದ್ದವರೇ ಇಂದು ಬುದ್ಧಿಮಾಂಧ್ಯ ಮಕ್ಕಳ ತರ ಆಡುತ್ತಾರೆ. ಇಂತಹುದರಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ಶಿಕ್ಷಣ ನೀಡಿ, ಲಾಭಕ್ಕಾಗಿ ಸಂಸ್ಥೆ ನಡೆಸದೇ ಪುಣ್ಯ ಪ್ರಾಪ್ತಿಗಾಗಿ ಸಂಸ್ಥೆ ನಡೆಸುತ್ತಿರುವುದು ಶ್ಲಾಘನೀಯ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ 28 ಸ್ಥಾನ: ನಿಖಿಲ್ ಕುಮಾರಸ್ವಾಮಿ ವಿಶ್ವಾಸ
ಇಂತಹ ಮಕ್ಕಳ ಜೊತೆ ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಸ್ಮರಣೀಯ. ಮಾನವನಲ್ಲಿ ಮಾನವೀಯತೆ ಇದೆಯೋ ಇಲ್ಲವೋ ಪರೀಕ್ಷಿಸಲು ದೇವರು ಇಂತಹ ಮಕ್ಕಳನ್ನು ಸೃಷ್ಟಿಸುತ್ತಾನೆ ಎಂದು ಬೇಸರ ವ್ಯಕ್ತಪಡಿಸಿದರು. ಇಂದಿನ ಜಾಗತೀಕರಣ, ಖಾಸಗೀಕರಣದ ಮಧ್ಯೆ ಅಂತಃಕರಣ ಸತ್ತಿದ್ದು, ಅಂತಃಕರಣದ ಸಮಾಜ ನಿರ್ಮಾಣಗೊಳ್ಳಬೇಕಿದೆ. ಬುದ್ಧಿಮಾಂದ್ಯ ಮಕ್ಕಳಿಗೆ ಸರ್ಕಾರದ ವಿಶೇಷ ಕಾರ್ಯಕ್ರಮಗಳು ಸರಿಯಾಗಿ ತಲುಪಬೇಕು. ದೇವರು ಇಂತಹ ಮಕ್ಕಳಿಗೆ ಶಕ್ತಿ, ಆರೋಗ್ಯ, ಉತ್ತಮ ಭವಿಷ್ಯ ಕರುಣಿಸಲಿ ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಕ್ಕಳ ಜೊತೆ ಬೆರೆತ ಬೊಮ್ಮಾಯಿ ಅವರು ಮಕ್ಕಳಿಗೆ ಕೇಕ್ ತಿನ್ನಿಸಿ ಬಟ್ಟೆ ವಿತರಿಸಿದರು. ನಂತರ ಬೊಮ್ಮಾಯಿ ಅವರು ತಮ್ಮ ತಂದೆ ಎಸ್.ಆರ್. ಬೊಮ್ಮಾಯಿ ಹಾಗೂ ತಾಯಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮನೋಹರ ತಹಶೀಲ್ದಾರ್, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಅಜ್ಜಂಪೀರ ಖಾದ್ರಿ, ಭರತ್ ಬೊಮ್ಮಾಯಿ, ನವೀನ್ ಸವಣೂರ, ಗವಿಸಿದ್ದಪ್ಪ ದ್ಯಾಮಣ್ಣವರ ಇತರರು ಇದ್ದರು.