ಕಾಂಗ್ರೆಸ್​ಗೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂದ ಕಟೀಲ್‌ಗೆ ಗುದ್ದಿದ ಟಗರು

By Suvarna NewsFirst Published Mar 21, 2021, 2:47 PM IST
Highlights

ಕಾಂಗ್ರೆಸ್​ಗೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಹೇಳಿಕೆ ಸ್ವತಃ ಸಿದ್ದು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಮಾ.21): ಕಾಂಗ್ರೆಸ್​ಗೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ (ಶನಿವಾರ) ರಾಯಚೂರಿನ ಮಸ್ಕಿಯಲ್ಲಿ ನಡೆ ಉಪಚುನಾವಣೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಕಟೀಲ್, ಕಾಂಗ್ರೆಸ್‌ಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ 90 ಜೊತೆ ಬಟ್ಟೆ ಖರೀದಿಸಿದ್ದಾರೆ ಎಂದು ಲೇವಡಿ ಮಾಡಿದ್ದರು.

'ಇನ್ನೊಂದು ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ರಾಜೀನಾಮೆ'

ಇನ್ನು ಈ ಬಗ್ಗೆ ಟ್ವೀಟ್ ಮೂಲಕ ಖಡಕ್ ಪ್ರತಿಕ್ರಿಯೆ ನೀಡಿರುವ ಸಿದ್ದು,  ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಿಗೆ ಕೂಡಾ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ನಾಯಕರು ಹಾಗೂ ಸಚಿವರ ವಿರುದ್ಧ ಸಿಡಿ ವಿಚಾರವಾಗಿ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ನಿರಂತರವಾಗಿ ಸರ್ಕಾರದ ವಿರುದ್ಧ ಮುಗಿಬೀಳುತ್ತಿದ್ದಾರೆ.

click me!