ಕೇವಲ ಓಟಿಗಾಗಿ ಮಾತ್ರ ಹಿಂದುತ್ವ, ಹಿಂದೂ ಧರ್ಮದ ಬಗ್ಗೆ ಬಿಜೆಪಿಗೆ ಗೌರವವೇ ಇಲ್ಲ

Published : Sep 15, 2021, 07:31 PM IST
ಕೇವಲ ಓಟಿಗಾಗಿ ಮಾತ್ರ ಹಿಂದುತ್ವ, ಹಿಂದೂ ಧರ್ಮದ ಬಗ್ಗೆ ಬಿಜೆಪಿಗೆ ಗೌರವವೇ ಇಲ್ಲ

ಸಾರಾಂಶ

* ಮೈಸೂರಿನಲ್ಲಿ ದೇವಸ್ಥಾನ ತೆರವು ವಿವಾದ * ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ * ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದ ಸಿದ್ದರಾಮಯ್ಯ

ಬೆಂಗಳೂರು, (ಸೆ.15) : ಬಿಜೆಪಿಯವರು ಓಟಿಗೆ ಮಾತ್ರ ಹಿಂದುತ್ವ ಅಸ್ತ್ರವನ್ನು ಬಳಸುತ್ತಾರೆ. ಹಿಂದೂ ಧರ್ಮದ ಬಗ್ಗೆ ಅವರಿಗೆ ಗೌರವವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಇಂದು (ಸೆ.15) ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಗಮನಕ್ಕೆ ತರದೆ ಮುಖ್ಯ ಕಾರ್ಯದರ್ಶಿಗಳು ದೇವಸ್ಥಾನ ತೆರವುಗೊಳಿಸುವ ಕುರಿತು ಪತ್ರ ಬರೆಯಲು ಸಾಧ್ಯವಿಲ್ಲ. ಇಡೀ ಪ್ರಕರಣದಲ್ಲಿ ಬಿಜೆಪಿ ನಾಟಕವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್​​ ಹೇಳಿದ್ದು ಸತ್ಯ: ಸ್ವಪಕ್ಷದ ವಿರುದ್ಧವೇ ಈಶ್ವರಪ್ಪ ಅಸಮಾಧಾನ

ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಸುಪ್ರೀಂ ಕೋರ್ಟಿನ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದ ಮೇಲೆ ತಮ್ಮ ಮಾನ ಉಳಿಸಿಕೊಳ್ಳಲು ಸರಕಾರ ಬಣ್ಣ ಬದಲಾಯಿಸಿದೆ. ದೇವಾಲಯ ಒಡೆದ ಮೇಲೆ ಮಾತನಾಡುತ್ತಿರುವ ಮೈಸೂರು ಸಂಸದರು, ಮೊದಲೇ ಸರಕಾರದ ಗಮನಕ್ಕೆ ತಂದು ಉಳಿಸಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು.

ದೇವಾಲಯಗಳನ್ನು ಬಿಜೆಪಿಯವರೇ ನಾಶ ಮಾಡುತ್ತಿದ್ದಾರೆ. ಮಾತನಾಡಿದ್ರೆ ರಾಮ ಮಂದಿರ ಕಟ್ಟುತ್ತೇವೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಭಕ್ತರ ಗಮನಕ್ಕೆ ತಂದು ಪರ್ಯಾಯ ವ್ಯವಸ್ಥೆ ಮಾಡಿದ ಬಳಿಕ ದೇವಸ್ಥಾನ ಕೆಡವಬಹುದಿತ್ತು. ಏಕಾಏಕಿ ದೇವಸ್ಥಾನ  ಧ್ವಂಸ ಮಾಡಿರುವುದು ಬಿಜೆಪಿಯವರ ಡೋಂಗಿತನವನ್ನು ತೋರಿಸುತ್ತದೆ ಎಂದರು.

ಸುಪ್ರೀಂ ಕೋರ್ಟ್‌ ಆದೇಶ ಬಂದದ್ದು ಇಂದು, ನಿನ್ನೆಯಲ್ಲ. ಸರಕಾರ ಇಷ್ಟು ದಿನ ಏನು ಮಾಡುತ್ತಿತ್ತು? ಈಗ ಯಾಕೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ನಾಟಕವಾಡುತ್ತಿದೆ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!