ಯಾವ ನೈತಿಕತೆ ಆಧಾರದಲ್ಲಿ ಆರಗ ಜ್ಞಾನೇಂದ್ರ ಗೃಹ ಸಚಿವರಾಗಿ ಮುಂದುವರಿದಿದ್ದಾರೆ?

Published : Apr 30, 2022, 01:13 PM IST
ಯಾವ ನೈತಿಕತೆ ಆಧಾರದಲ್ಲಿ ಆರಗ ಜ್ಞಾನೇಂದ್ರ ಗೃಹ ಸಚಿವರಾಗಿ ಮುಂದುವರಿದಿದ್ದಾರೆ?

ಸಾರಾಂಶ

* ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ * ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ * ಯಾವ ನೈತಿಕತೆ ಆಧಾರದಲ್ಲಿ ಆರಗ ಜ್ಞಾನೇಂದ್ರ ಗೃಹ ಸಚಿವರಾಗಿ ಮುಂದುವರಿದಿದ್ದಾರೆ? ಎಂದು ಪ್ರಶ್ನೆ

ಬೆಂಗಳೂರು, (ಏ.30): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದೆ. ಆದ್ರೆ, ತನಿಖೆಗೂ ಮುನ್ನವೇ ಪಿಎಸ್‌ಐ ಹುದ್ದೆಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಆದ್ರೆ, ಇದಕ್ಕೆ ಈಗಾಗಲೇ ಪಾಸ್ ಆದ  ಅಭ್ಯಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹ  ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದು, ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ ಪ್ರಶ್ನಿಸಿದ್ದಾರೆ.

ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು -ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು. ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು‌ ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

PSI Recruitment Scam: ಅಕ್ರಮಕ್ಕೆ ಕಾರಣವಾಗಿದ್ದ ಆ ಪುಟ್ಟ ವಸ್ತು ಯಾವುದು ಗೊತ್ತಾ?

ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್‌ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯವಿಲ್ಲ. ಪಿಎಸ್‌ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ? ಪಿಎಸ್‌ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ‌ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಪೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್‌ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೆ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ-ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್‌ಐ ನೇಮಕಾತಿ ಅಕ್ರಮ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ