
ಬೆಂಗಳೂರು, (ಅ.17): ದಸರಾ (Dasara) ಹಬ್ಬದ ನಿಮಿತ್ತ ಕೆಲ ಪೊಲೀಸ್ ಠಾಣಾ ಸಿಬ್ಬಂದಿ ಸಾಂಸ್ಕೃತಿಕ ಧಿರಿಸಿನಲ್ಲಿ (Dress Code) ಫೋಟೋಶೂಟ್‌ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಕುಟುಕಿದ್ದಾರೆ.
"
ಮಂಗಳೂರಿನಲ್ಲಿ (Mangaluru) ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ಹಾಗೂ ವಿಜಯಪುರ (Vijayapura), ಕಾಪು ಪೊಲೀಸ್ (Police) ಠಾಣೆಯ ಸಿಬ್ಬಂದಿ ಉಡುಗೆ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.
ಬಿಎಸ್‌ವೈ ಭೇಟಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ
ಪೊಲೀಸರ ಧಿರಿಸು ಮಾತ್ರ ಯಾಕೆ ಬದಲಾಯಿಸಿದ್ದೀರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು ಎಂದು ಹರಿಹಾಯ್ದಿದ್ದಾರೆ.
ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ… ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ, ರಾಜ್ಯದಲ್ಲಿ ಸರ್ಕಾರ ಇದೆಯೇ? ಎಂದೂ ಅವರು ಪ್ರಶ್ನಿಸಿದ್ದಾರೆ.
ಗೂಂಡಾಗಿರಿಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿದ 'ಸಿಎಂ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ'. ಹಾಗಾಗಿ 'ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕ' ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದ ಜಂಗರ್ ರಾಜ್ ಅಲ್ಲ. ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.