'ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ'

Published : Aug 18, 2020, 07:34 PM ISTUpdated : Aug 18, 2020, 08:01 PM IST
'ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ'

ಸಾರಾಂಶ

ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು, (ಆ.18) : ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ದಿನಕ್ಕೊಬ್ಬ ಸಚಿವರು, ಶಾಸಕರು ಗಲಭೆ ಪ್ರದೇಶಕ್ಕೆ ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ.

ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಮುಖ್ಯಮಂತ್ರಿ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ ಎಂದಿದ್ದಾರೆ.

ಮೃಗಿಯತೆ ಅಲ್ಪಕಾಲ ಮಾತ್ರ, ಸತ್ಯವೇ ಶಾಶ್ವತ : `ಕೈ’ಗೆ ಕುಟುಕಿದ ಸುಧಾಕರ್

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ