'ಗಾಂಧೀಜಿಯನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ಮಂದಿ ಹೆಚ್ಚಾಗಿದ್ದಾರೆ'

Published : Jan 30, 2021, 04:51 PM IST
'ಗಾಂಧೀಜಿಯನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ಮಂದಿ ಹೆಚ್ಚಾಗಿದ್ದಾರೆ'

ಸಾರಾಂಶ

 ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಆರ್‌ಎಸ್‌ಎಸ್‌ ವಿರುದ್ಧ ಕಿಡಿಕಾರಿದರು.

ಬೆಂಗಳೂರು, (ಜ.30): ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು (ಶನಿವಾರ) ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ಮಹಾತ್ಮ ಗಾಂಧೀಜಿಯವರು ಯಾರನ್ನೂ ಶತ್ರುಗಳು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆ ಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆ ಮಾಡಿದ್ದ ಎಂಬುದನ್ನು ನಾವು ಮರೆಯಬಾರದು ಎಂದು ಪರೋಕ್ಷವಾಗಿ ಆರ್‌ಎಸ್‌ಎಸ್‌ಗೆ ಟಾಂಗ್ ಕೊಟ್ಟರು.

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶ ಒಡೆಯುತ್ತಿದೆ: ಸಿದ್ದರಾಮಯ್ಯ

ಮಹಾತ್ಮಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವವನ್ನು ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು ಹುತಾತ್ಮರು ಅನಾಮಿಕರಾಗಿಯೇ ಉಳಿದಿದ್ದಾರೆ. ಅವರ ನಿಸ್ವಾರ್ಥವಾದ ದೇಶಭಕ್ತಿ ನಮಗೆಲ್ಲರಿಗೂ ಆದರ್ಶವಾಗಬೇಕು ಎಂದರು.

ಗಾಂಧೀಜಿ ಅವರು ಯಾವ ಉದ್ದೇಶಕ್ಕಾಗಿ ಹೋರಾಡಿದರೋ, ಆ ಕೋಮುಸೌಹಾರ್ದತೆಯ ಸ್ಥಾಪನೆಯ ಕಾರ್ಯ ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಗಾಂಧೀಜಿಯವರ ಚಿಂತನೆಗಳು ಒಂದೊಂದಾಗಿ ನಮ್ಮ ಕಣ್ಣಮುಂದೆಯೇ ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಧರ್ಮಧರ್ಮಗಳ ನಡುವೆ ವೈಮನಸ್ಸು ಹುಟ್ಟಿಸಿ, ಗಲಭೆ ಸೃಷ್ಟಿಸಿ ಅದರ ಮೂಲಕ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ