
ವರದಿ : ಮಹಂತೇಶ್ ಕುಮಾರ್, ಏಷ್ಯನೆಟ್ ಸುವರ್ಣ ನ್ಯೂಸ್.
ತುಮಕೂರು(ಜ.31): ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತುಮಕೂರಿನಿಂದ ಸ್ಪರ್ಧಿಸುವಂತೆ ಜಿಲ್ಲೆಯ ಹಲವು ಕ್ಷೇತ್ರಗಳಿಂದ ಆಹ್ವಾನ ಬರುತ್ತಿದೆ. ನಿನ್ನೆಯಷ್ಟೇ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಆಹ್ವಾನ ನೀಡಿದ್ದರು, ಇದರ ಬೆನ್ನಲ್ಲೇ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡರಿಂದ ಸಿದ್ದುಗೆ ಆಹ್ವಾನ ನೀಡಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿ ಆಹ್ವಾನ ನೀಡಿ ಬಂದಿದ್ದಾರೆ.
ಕಳೆದ ವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ನನ್ನ ಎದುರು ಸ್ಪರ್ಧೆ ಮಾಡುವಂತೆ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದರು, ನಾನು ಸಿದ್ದರಾಮಯ್ಯ ಅವರಂತಹ ನಾಯಕರ ಜೊತೆ ಪೈಪೋಟಿ ಮಾಡ್ವೇಕು. ಹಾಲು ಕುಡಿಯುವ ಮಕ್ಕಳ ಜೊತೆ ಚುನಾವಣೆ ಎದುರಿಸುವ ದುಸ್ಥಿತಿ ನಮಗೆ ಬಂದಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಲಘುವಾಗಿ ಟೀಕೆ ಮಾಡಿದ್ದರು.
ಮಾಧುಸ್ವಾಮಿಯವರ ಈ ಮಾತುಗಳು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ, ಇದೀಗ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರಂತೆ, ಒಂದು ವೇಳೆ ಚಿಕ್ಕನಾಯಕನಹಳ್ಳಿಯಲ್ಲಿ ಸ್ಪರ್ಧಿಸಿದರೆ, ಎಲ್ಲಾ ಒಟ್ಟಾಗಿ ಶ್ರಮಿಸಿ ಭಾರಿ ಅಂತರದಿಂದ ಗೆಲ್ಲಿಸಿಕೊಂಡು ಬರುವುದಾಗಿ ತಿಳಿಸಿದ್ದಾರಂತೆ.
ರಾಯಚೂರಿನಿಂದ ಸಿದ್ದರಾಮಯ್ಯ ಸ್ಪರ್ಧಿಸಿದರೆ 2 ಎಕರೆ ಹೊಲ ಗಿಫ್ಟ್: ಗ್ರಾ.ಪಂ. ಸದಸ್ಯನ ಆಹ್ವಾನ
ಚಿಕ್ಕನಾಯಕನಹಳ್ಳಿ ತಾಲೂಕಿನ ಕಾಂಗ್ರೆಸ್ ಮುಖಂಡರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಿದ್ದಾರಂತೆ ಜೊತೆಗೆ ಅಂತ ಸಂದರ್ಭ ಬಂದರೆ ಎಲ್ಲಾ ರಿಪೋರ್ಟ್ ಗಳನ್ನು ತರಿಸಿಕೊಂಡು ಪರಿಶೀಲಿಸುವುದಾಗಿ ಹೇಳಿದ್ದಾರಂತೆ. ಒಂದು ವೇಳೆ ಅವರು ಸ್ಪರ್ಧೆ ಮಾಡಲಿಲ್ಲ ಅಂದ್ರೆ, ಸ್ಥಳೀಯರಿಗೆ ಟಿಕೆಟ್ ಕೊಡ್ಬೇಕು. ಚಿಕ್ಕನಾಯಕನಹಳ್ಳಿ ಜನರೇ ಸ್ಥಳೀಯರಿಗೆ ಟಿಕೆಟ್ ಕೊಡ್ಬೇಕು ಅಂತ ಈಗಾಗಲೇ ಆಗ್ರಹಿಸ್ತಿದ್ದಾರಂತೆ.
ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ: ಶಾಸಕ ಯತೀಂದ್ರ
ಚಿಕ್ಕನಾಯಕನಹಳ್ಳಿಯಲ್ಲಿ ಸ್ಪರ್ಧೆ ಮಾಡುವಂತೆ ಮಾಧುಸ್ವಾಮಿ ಸಿದ್ದರಾಮಯ್ಯಗೆ ಚಾಲೆಂಜ್ ಹಾಕ್ತಾರೆ, ಸಿದ್ದರಾಮಯ್ಯ ಸಮುದ್ರದಲ್ಲಿ ಈಜಾಡುವಂತವರು, ಇಲ್ಲಿನ ಕಟ್ಟೆಯಲ್ಲಿ ಈಜಾಡುವಂತವರಲ್ಲ.ಆ ದೊಡ್ಡ ಸಿದ್ದರಾಮಯ್ಯ ಬೇಡ ನನ್ನಂತಹ ಸಣ್ಣ ಸಿದ್ದರಾಮಯ್ಯ ಸಾಕು, ಜನ ಗೆಲ್ಲಿಸ್ತಾರೆ. ಮಾಧುಸ್ವಾಮಿ ಆ ಸಿದ್ದರಾಮಯ್ಯನ್ನ ಕರೆಯೋದು ಬೇಡ ನಾನು ಚಿಕ್ಕ ಸಿದ್ದರಾಮಯ್ಯ ನನ್ನ ವಿರುದ್ಧ
ಗೆಲ್ಲಲ್ಲಿ ಎಂದು ಸವಾಲ್ ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.