'ಯಾವ ಮಣ್ಣಿನ ಮಕ್ಕಳೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡ್ಲಿಲ್ಲ, ಸಿದ್ದು ಮಾಡಿದ್ರು'

Published : Jan 27, 2019, 04:22 PM IST
'ಯಾವ ಮಣ್ಣಿನ ಮಕ್ಕಳೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡ್ಲಿಲ್ಲ, ಸಿದ್ದು ಮಾಡಿದ್ರು'

ಸಾರಾಂಶ

ಎಚ್.ಎಂ, ರೇವಣ್ಣ ಅವರು ಪರೋಕ್ಷವಾಗಿ ಮಣ್ಣಿನ ಮಗ ಎಂದೇ ಕರೆಸಿಕೊಳ್ಳುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವರನ್ನು ಕಿಚಾಯಿಸಿದ್ದಾರೆ.

ಬೆಂಗಳೂರು, (ಜ.27): ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗಗಳ ನಾಯಕರಲ್ಲ. ಬದಲಾಗಿ ಸಮಾಜದ ಎಲ್ಲಾ ಸಮುದಾಯಗಳ ನಾಯಕ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ. 

ನೈಸ್ ರಸ್ತೆಯ ಸೋಂಪುರ ಗೇಟ್ ಸಮೀಪದ ಜಟ್ಟಿಗರಹಳ್ಳಿಯಲ್ಲಿ ಇಂದು (ಭಾನುವಾರ) ಕನಕ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಕಚೇರಿಯಲ್ಲಿ ಬಸವೇಶ್ವರ ಭಾವಚಿತ್ರ ಹಾಕಿಸಿದ್ದು ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಗುಣಹಾನ ಮಾಡಿದರು. 

ಅವರು ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೂ ಅಪಾರ ಕೊಡುಗೆ ಕೊಟ್ಟಿದ್ದಾರೆ. ಯಾವುದೇ ಮಣ್ಣಿನ ಮಕ್ಕಳು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಿಲ್ಲ. 

ಅದನ್ನೂ ಕೂಡ ಸಿದ್ದರಾಮಯ್ಯನವರೇ ಮಾಡಿದ್ದು ಎಂದು ಎಚ್‌.ಎಂ ರೇವಣ್ಣ ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಾಲೆಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಂಎಸ್ಪಿ ಅಡಿಯಲ್ಲಿ ತೊಗರಿ ಖರೀದಿ ಆರಂಭಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್