
ಮೈಸೂರು(ಮಾ.15): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಹೆಚ್ಚು ಕಾಳಜಿ ಇರುವುದರಿಂದ ಪ್ರತಿ ಮನೆಗೆ 5 ಲಕ್ಷ ಸಬ್ಸಿಡಿ ನೀಡಿ 8,500 ಕೋಟಿ ರು. ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಲಲಿತಾದ್ರಿಪುರದಲ್ಲಿ ಕರ್ನಾಟಕ ಸರ್ಕಾರ ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಜಿಲ್ಲಾಡಳಿತ ಮೈಸೂರು ಜಿಲ್ಲೆ, ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 1,440 ಗುಂಪು ಮನೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, ನೆರವೇರಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ರಾಜಕೀಯಕ್ಕೆ ಬಂದ್ರೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಬೇಕು ಎಂಬುದು ನನ್ನ ಆಸೆ ಇತ್ತು: ಯದುವೀರ್ ಒಡೆಯರ್
ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಮ್ಮ ಸರ್ಕಾರವಿದ್ದಾಗ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ಬಡವರಿಗಾಗಿ ಕಟ್ಟಿದ್ದೇವೆ. ಈಗ ಕೃಷ್ಣರಾಜ ಕ್ಷೇತ್ರದ ಫಲಾನುಭವಿಗಳಿಗೆ 940 ಮನೆ, ವರುಣ ಕ್ಷೇತ್ರದ ಫಲಾನುಭವಿಗಳಿಗೆ 500 ಮನೆಗಳನ್ನು ಕಟ್ಟಿಕೊಡಲಾಗುವುದು, ನಮ್ಮ ಸರ್ಕಾರ ಬಂದ ಮೇಲೆ ವರುಣ ಕ್ಷೇತ್ರಕ್ಕೆ ವಸತಿ ಸಚಿವರು ಮೂರು ಸಾವಿರ ಮನೆ ಮಂಜೂರು ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ದೀನ ದಲಿತರ ಪರವಿರುವ ಸರ್ಕಾರವಾಗಿದೆ ಎಂದರು.
ಕೆ.ಆರ್. ಕ್ಷೇತ್ರದ ಶಾಸಕ ಶ್ರೀವತ್ಸ, ಎಂಡಿಎ ಅಧ್ಯಕ್ಷ ಕೆ.ಮರೀಗೌಡ ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಮುಖಂಡರಾದ ಮಂಜುಳಾ ಮಂಜುನಾಥ್, ರಮೇಶ್ ಮುದ್ದೇಗೌಡ, ಸಕ್ಕಳ್ಳಿ ಬಸಸರಾಜು, ಉತ್ತನಹಳ್ಳಿ ಶಿವಣ್ಣ, ನಗರಪಾಲಿಕೆ ಆಯುಕ್ತೆ ಡಾ. ಎಂ.ಎನ್. ಮಧು, ಉಪ ಆಯುಕ್ತೆ ಕುಸುಮಾ ಕುಮಾರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ವಿಜಯ್, ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್ ಕುಮಾರ್, ನಾಗರಾಜು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.