* ಸಿದ್ದರಾಮೋತ್ಸವ ಕಾರ್ಯಕ್ರಮ ಕುರಿತು ಮಾದ್ಯಮಗಳಲ್ಲಿ ನೋಡಿದ್ದೇನೆ
* ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ನನ್ನ ಕರೆದಿಲ್ಲ, ಅವರ ಇಷ್ಟ ಮಾಡಿಕೊಳ್ಳಲಿ
* ಈಗ ಗುರುವನ್ನೇ ಬಿಟ್ಟು ಬೇರೆ ಪಕ್ಷಕ್ಕೆ ಸೇರಿದ್ದೇನೆ
ಕೋಲಾರ(ಜು.09): ಸಿದ್ದರಾಮಯ್ಯ ಅವರು ನನ್ನ ಗುರು, ನಾನು ಅವರ ಶಿಷ್ಯನೆ, ಈಗ ಗುರುವನ್ನೇ ಬಿಟ್ಟು ಬೇರೆ ಪಕ್ಷಕ್ಕೆ ಸೇರಿದ್ದೇನೆ, ಈಗ ಬೇರೆ ಗುರು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಇಂದು(ಶನಿವಾರ) ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಅರಳೇರಿ ರಸ್ತೆಯಲ್ಲಿರುವ ಶ್ರೀರಂಗಂ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಸಿದ್ದರಾಮೋತ್ಸವ ಕಾರ್ಯಕ್ರಮ ಕುರಿತು ಮಾದ್ಯಮಗಳಲ್ಲಿ ನೋಡಿದ್ದೇನೆ, ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ನನ್ನ ಕರೆದಿಲ್ಲ, ಅವರ ಇಷ್ಟ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.
ಹೊಸಕೋಟೆ ಸ್ವಾಭಿಮಾನ ಮಾರಾಟಕ್ಕಿಲ್ಲ, ಎಂಟಿಬಿಗೆ ಠಕ್ಕರ್ ನೀಡಿದ ಶರತ್ ಬಚ್ಚೇಗೌಡ
ಸಿದ್ದರಾಮಯ್ಯ ಅವರನ್ನ ಕೋಲಾರದಲ್ಲಿ ಸ್ಪರ್ಧೆಗೆ ಹಲವು ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ಮಾಹಿತಿ ಇಲ್ಲ ಅಧಿಕೃತವಾಗಿ ಆ ಬಗ್ಗೆ ಏನೂ ಮಾಹಿತಿ ಇಲ್ಲ ಎಂದ್ರು.ಇನ್ನೂ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭ ಕರೆಂದ್ಲಾಜೆ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ನಾಗೇಶ್ ಭಾಗಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಭಾಗವಹಿಸಿದ್ರು. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಖಾತೆ ಸಚಿವೆ ಶೋಭ ಕರೆಂದ್ಲಾಜೆ ಕೇಂದ್ರದ ಎಬಿಅರ್‌ಕೆ ಆರೋಗ್ಯ ಯೋಜನೆ ಮಹತ್ವ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ.