'ಕಾಂಗ್ರೆಸ್‌ಗೆ ಮತ ನೀಡಿದರೆ ಸಿದ್ದರಾಮಯ್ಯ ಸಿಎಂ ಖಚಿತ'

Published : Apr 06, 2023, 04:15 AM IST
'ಕಾಂಗ್ರೆಸ್‌ಗೆ ಮತ ನೀಡಿದರೆ ಸಿದ್ದರಾಮಯ್ಯ ಸಿಎಂ ಖಚಿತ'

ಸಾರಾಂಶ

ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುತ್ತಿದ್ದು, ನನಗೆ ಮತ ಹಾಕಿ ಬೆಂಬಲಿಸಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿದರೆ ಮುಖ್ಯಮಂತ್ರಿ ಆಗುವುದರಲ್ಲಿ ಸಂದೇಹ ಇಲ್ಲ ಎಂದ ಇಕ್ಬಾಲ್‌ ಅನ್ಸಾರಿ. 

ಗಂಗಾವತಿ(ಏ.06): ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದರೆ ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಹೇಳಿದರು. ತಾಲೂಕಿನ ಹಂಪಸದುರ್ಗಾದಲ್ಲಿ ಜರುಗಿದ ಚುನಾವಣೆ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುತ್ತಿದ್ದು, ನನಗೆ ಮತ ಹಾಕಿ ಬೆಂಬಲಿಸಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿದರೆ ಮುಖ್ಯಮಂತ್ರಿ ಆಗುವುದರಲ್ಲಿ ಸಂದೇಹ ಇಲ್ಲ ಎಂದರು.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆ ಅನುಷ್ಟಾನಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಮತ್ತೇ ಮುಖ್ಯಮಂತ್ರಿ ಆದರೆ ಹಲವಾರು ಯೋಜನೆ ಕಾರ್ಯಗತಗೊಳಿಸುತ್ತಾರೆ ಎಂದರು.

ಈ ಭಾರಿ ಚುನಾವಣೆಗೆ ಬಳ್ಳಾರಿಯಿಂದ ಬಂದಿದ್ದಾರೆ, ಈಗಾಗಲೇ ಲೂಟಿ ಮಾಡಿ ಸಾಕಷ್ಟುಹೆಸರು ಪಡೆದಿದ್ದಾರೆ.ಇಂತವರು ಇಲ್ಲಿ ಇರಲಿಕ್ಕೆ ಸಾಧ್ಯಇಲ್ಲ. ಸರ್ಕಾರದ ಸಂಪತ್ತು ನಮ್ಮ ಸಂಪತ್ತು ಆಗಿದೆ.ಇಂತಹ ಸರ್ಕಾರದ ಲೂಟಿ ಮಾಡಿ ಈಗ ಗಂಗಾವತಿಗೆ ಬಂದಿದ್ದಾರೆ. ಇವರಿಂದ ಅಭಿವೃದ್ಧಿ ಹೇಗೆ ಸಾಧ್ಯ ಎಂದರು. ಈ ಸಂದರ್ಭದಲ್ಲಿ ಹಲವಾರು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಕಾಂಗ್ರೆಸ್ಸಿನವರಿಗೆ ಗುಂಡಿಗೆನೂ ಇಲ್ಲ, ಗಂಡಸ್ತನವೂ ಇಲ್ಲ: ಸಚಿವ ಆನಂದ್‌ ಸಿಂಗ್‌ ವಿವಾದಾತ್ಮಕ ಹೇಳಿಕೆ

ರೋಡ್‌ ಶೋ:

ಹಂಪಸ ದುರ್ಗಾದಲ್ಲಿ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ರೋಡ್‌ ಶೋ ನಡೆಸಿದರು.ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಗ್ರಾಮದಲ್ಲಿ ಮತ ಯಾಚಿಸಿದರು. ಅಸಂಖ್ಯಾತ ಮಹಿಳೆಯರು,ಯುವಕರು ಜೈ ಘೋಷ ಹಾಕಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ