ಸಿದ್ದರಾಮಯ್ಯ ಹಿಂದುಳಿದ ಸಮಾಜದ ದೊಡ್ಡ ನಾಯಕ : ಹೊಗಳಿದ ಶ್ರೀರಾಮುಲು

Kannadaprabha News   | Asianet News
Published : Jul 14, 2021, 08:10 AM ISTUpdated : Jul 14, 2021, 08:48 AM IST
ಸಿದ್ದರಾಮಯ್ಯ ಹಿಂದುಳಿದ ಸಮಾಜದ ದೊಡ್ಡ ನಾಯಕ : ಹೊಗಳಿದ  ಶ್ರೀರಾಮುಲು

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿ ನನ್ನ ಸ್ಪರ್ಧೆ ಬಗ್ಗೆ ಚುನಾವಣೆ ಸಂದರ್ಭದಲ್ಲಿ ಪಕ್ಷ ನಿರ್ಧರಿಸಲಿದೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿಕೆ

ಚಿತ್ರದುರ್ಗ (ಜು.14): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿ. ನನ್ನ ಸ್ಪರ್ಧೆ ಬಗ್ಗೆ ಚುನಾವಣೆ ಸಂದರ್ಭದಲ್ಲಿ ಪಕ್ಷ ನಿರ್ಧರಿಸಲಿದೆ. ಕಳೆದ ಸಲ ಭಗವಂತ ನೀಡಿದ ಅವಕಾಶ ಎಂದು ಭಾವಿಸಿ ಬಾದಾಮಿಯಲ್ಲಿ ಸ್ಪರ್ಧಿಸಿದ್ದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಮೊಳಕಾಲ್ಮೂರು ತಾಲೂಕಿನ ಹಿರೇಹಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಹಣೆ ಬರಹ ಏನಿದೆಯೋ ಹೆಂಗಿದೆಯೋ ಗೊತ್ತಿಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಜನರೇ ಹಣೆಬರಹ ಬರೆಯುತ್ತಾರೆ ಎಂದರು.

ಶ್ರೀರಾಮುಲು ಪಿಎ ಪರ ಯೋಗೇಶ್ವರ್ ಬ್ಯಾಟಿಂಗ್: ವಿಜಯೇಂದ್ರಗೆ ಪರೋಕ್ಷ ಟಾಂಗ್

ನೆಹರು ಕುಟುಂಬ, ದೊಡ್ಡ ವ್ಯಕ್ತಿಗಳು 2 ಕಡೆ ಸ್ಪ​ರ್ಧಿಸುತ್ತಿದ್ದರು. ವಾಲ್ಮೀಕಿ ಸಮಾಜದ ನನಗೆ 2 ಕಡೆ ಸ್ಪರ್ಧೆಗೆ ಅವಕಾಶ ಸಿಕ್ಕಿತ್ತು. ಬಾದಾಮಿ ಜನ ಬೆಂಬಲಿಸಿದರು ಕಡಿಮೆ ಅಂತರದಲ್ಲಿ ಸೋಲಾಗಿತ್ತು ಎಂದರು.

ವಿಜಯೇಂದ್ರ ನಡೆಗೆ ಸಚಿವ ಶ್ರೀರಾಮುಲು ಅಸಮಾಧಾನ ..

ಸಿದ್ದರಾಮಯ್ಯ ಮತ್ತು ನಾವೆಲ್ಲಾ ಹಿಂದುಳಿದ ಸಮಾಜದಿಂದ ಬಂದವರು. ಅನೇಕ ವರ್ಷಗಳಿಂದ ಬಡವರು, ಹಿಂದುಳಿದವರ ಪರ ಹೋರಾಟದಿಂದ ಅವರು ಮೇಲೆ ಬಂದಿದ್ದಾರೆ. ಅವರು ಹಿಂದುಳಿದ ಸಮಾಜದ ದೊಡ್ಡ ನಾಯಕ. ಅಂಥವರಿಗೆ ಗೌರವ ಕೊಡುವುದು ನಮ್ಮ ಸಂಪ್ರದಾಯ. ಅವರನ್ನು ರಾಜಕಾರಣ ಬಂದಾಗ ಮಾತ್ರ ವಿರೋಧಿ​ಸುತ್ತೇನೆ. ಉಳಿದಂತೆ ವ್ಯಕ್ತಿತ್ವ ಮತ್ತು ಹಿಂದುಳಿದ ಸಮಾಜದ ವಿಚಾರದಲ್ಲಿ ಗೌರವಿಸುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!