ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದೆ: ಜಗದೀಶ್‌ ಶೆಟ್ಟರ್

By Govindaraj SFirst Published Apr 5, 2024, 9:57 AM IST
Highlights

ಮೈಸೂರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡರೆ ಸಿದ್ದರಾಮಯ್ಯನವರು ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್ ಹೇಳಿದರು.

ಬೆಳಗಾವಿ (ಏ.05): ಮೈಸೂರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡರೆ ಸಿದ್ದರಾಮಯ್ಯನವರು ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಮಾಜಿ ಸಿಎಂ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್‌ ಶೆಟ್ಟರ್ ಹೇಳಿದರು. ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರ ಸಮನ್ವಯ ಸಭೆ ಬಳಿಕ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇದು ನನ್ನ ಕೊನೆಯ ಚುನಾವಣೆ ಎಂದು ಕಳೆದ 10 ವರ್ಷಗಳಿಂದ ಹೇಳುತ್ತಿದ್ದಾರೆ. ಇದು ರಾಜಕೀಯದ ಗಿಮಿಕ್ ಎಂದು ಟೀಕಿಸಿದ ಅವರು, ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅಲ್ಲಿಯೇ ಬಿಡಾರ ಹೂಡಿ ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಪ್ರಚಾರ ನಡೆಸಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಜಾತಿ, ಸಮಾಜದ ಮೇಲೆ ನಡೆಯದು. ರಾಷ್ಟ್ರೀಯ ವಿಚಾರಧಾರೆ ಹಾಗೂ ಮೋದಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಮೋದಿ ಅವರೇ ನಮ್ಮ ಗ್ಯಾರಂಟಿ ಎಂದು ಹೇಳಿದರು.

ಜೆಡಿಎಸ್ ಮುಖಂಡರ, ಕಾರ್ಯಕರ್ತರ ಜೊತೆಗೆ ನಾವು ಕೆಲಸ ಪ್ರಾರಂಭಿಸಿದ್ದೇವೆ. ಪ್ರವಾಸ ಮಾಡಿದ ಕಡೆ ಜೆಡಿಎಸ್ ಮುಖಂಡರು ಬಿಜೆಪಿಗೆ ಸಾಥ್ ನೀಡುತ್ತಿದ್ದಾರೆ. ಇದೊಂದು ನ್ಯಾಚುರಲ್ ಅಲೈಯನ್ಸ್ ಎಂದ ಅವರು, ಹಿಂದಿನಿಂದಲೂ ಜೆಡಿಎಸ್ ಕಾಂಗ್ರೆಸ್ ವಿರೋಧಿ ನಿಲುವು ಹೊಂದಿದೆ. ಬಿಜೆಪಿ ಜತೆಗೆ ಜೆಡಿಎಸ್ ಹೊಂದಾಣಿಕೆ ಹೊಸದಲ್ಲ. ಹಿಂದೆಯೂ ಹೊಂದಾಣಿಕೆ ಮಾಡಿಕೊಂಡಿವೆ. ನರೇಂದ್ರ‌ ಮೋದಿಯವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ರಾಜ್ಯ ಮಟ್ಟದಲ್ಲಿ ಈಗಾಗಲೇ ಸಮನ್ವಯ ಸಭೆ ಆಗಿದೆ. ಈಗ ಜಿಲ್ಲಾ ಮಟ್ಟದಲ್ಲೂ ಸಭೆ ಮಾಡಿದ್ದೇವೆ. 

ದೆಹಲಿಯಿಂದ ಮತ್ತೆ ಕರೆ ಬಂದರೆ ಹೋಗುವೆ: ಕೆ.ಎಸ್.ಈಶ್ವರಪ್ಪ

ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಜೆಡಿಎಸ್ ನವರು ಸಹಕಾರ ನೀಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಅ‍ವರಿಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಶಾಸಕ ಬನಸಗೌಡ ಪಾಟೀಲ ಯತ್ನಾಳ ಕೂಡ ಪ್ರಚಾರಕ್ಕೆ ಆಗಮಿಸುವರು ಎಂದು ಹೇಳಿದರು.

click me!