ಮತ್ತೊಮ್ಮೆ ಮುಖ್ಯಮಂತ್ರಿ ಆಸೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

By Kannadaprabha NewsFirst Published Dec 12, 2022, 1:30 AM IST
Highlights

ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗದವರಿಗೆ ಶೇ. 33 ಹಾಗೂ ಮಹಿಳೆಯರಿಗೆ ಶೇ. 50 ಮೀಸಲಾತಿಯನ್ನು ಜಾರಿಗೊಳಿಸಿದ್ದೆ. ಆದರೆ ಆನಂತರ ಬಂದ ಸರ್ಕಾರಗಳು ನಾನು ನೀಡಿದ್ದ ಮೀಸಲಾತಿಯನ್ನು ತೆಗೆದುಹಾಕುವ ಪ್ರಯತ್ನ ಮಾಡುತ್ತಿದ್ದಾರೆ: ಸಿದ್ದು 

ಬೆಂಗಳೂರು(ಡಿ.12): ನಾನು ಕಳೆದ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಶಾಸಕನಾಗಿ, ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತಮ್ಮೆಲ್ಲರ ಆಶೀರ್ವಾದ ಕಾರಣ. ಅಂಥಾ ಅವಕಾಶ ಮತ್ತೊಮ್ಮೆ ಸಿಕ್ಕಿದರೆ ಜನರ ಎಲ್ಲಾ ಬೇಡಿಕೆಗಳನ್ನು ಪೂರ್ತಿಗೊಳಿಸುವ ಕೆಲಸ ಮಾಡುತ್ತೇನೆ ಎಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಇಂಗಿತವನ್ನು ಸಿದ್ದರಾಮಯ್ಯ ಹೊರಹಾಕಿದರು.

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗದವರಿಗೆ ಶೇಕಡಾ 33 ಹಾಗೂ ಮಹಿಳೆಯರಿಗೆ ಶೇಕಡಾ 50 ಮೀಸಲಾತಿಯನ್ನು ಜಾರಿಗೊಳಿಸಿದ್ದೆ. ಆದರೆ ಆನಂತರ ಬಂದ ಸರ್ಕಾರಗಳು ನಾನು ನೀಡಿದ್ದ ಮೀಸಲಾತಿಯನ್ನು ತೆಗೆದುಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Mysuru: ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆಗೆ ಸಿದ್ಧತೆ

ನಾನು ಮುಖ್ಯಮಂತ್ರಿಯಾಗಿರುವಾಗ ಎಲ್ಲ ಜಾತಿಗಳ ಬಡವರಿಗೆ 7 ಕೆ.ಜಿ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗ ಕೇಂದ್ರ ಸರ್ಕಾರದ ಅಕ್ಕಿಯನ್ನು ಸಿದ್ದರಾಮಯ್ಯ ಕೊಟ್ಟಿದ್ದು ಎನ್ನುತ್ತಾರೆ, ಹಾಗಾದರೆ ಬಿಜೆಪಿ ಅಧಿಕಾರದಲ್ಲಿರುವ ಬೇರೆ ರಾಜ್ಯಗಳಲ್ಲಿ ಈ ಯೋಜನೆ ಯಾಕಿಲ್ಲ? ಇದಕ್ಕೆ ಬೊಮ್ಮಾಯಿ ಅವರ ಬಳಿ ಉತ್ತರವಿದೆಯಾ ಎಂದು ಪ್ರಶ್ನಿಸಿದರು.
 

click me!