ಸಿದ್ದು ಒಬಿಸಿ ವರ್ಗ ಘಟಕ ಸದಸ್ಯ ಅಷ್ಟೇ: ಯತೀಂದ್ರ ಸಿದ್ದರಾಮಯ್ಯ

Kannadaprabha News   | Kannada Prabha
Published : Jul 07, 2025, 09:21 AM IST
yathindra siddaramaiah

ಸಾರಾಂಶ

ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗದಗ (ಜು.07): ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಗದಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ಸಿದ್ದರಾಮಯ್ಯ ಅವರೇ ಎಕ್ಸ್‌ (ಟ್ವಿಟರ್‌)ನಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದರು. ಬಡ್ತಿ ನೀಡಿ ಸಿಎಂ ಖುರ್ಚಿ ಕಸಿಯುವ ಪ್ಲ್ಯಾನ್ ಎಂಬ ಬಿಜೆಪಿ ಹೇಳಿಕೆಯನ್ನು ತಳ್ಳಿಹಾಕಿದ ಅವರು, ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುವವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪರವಾಗಿ ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ, ಅವರನ್ನು ಸದಸ್ಯರನ್ನಾಗಿ ಮಾಡಿದ್ದಾರೆ ಎಂದರು.

ವಿದ್ಯಾರ್ಥಿಗಳು ಸಮಾಜದ ದೊಡ್ಡ ಆಸ್ತಿ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಇಂದಿನ ವಿದ್ಯಾರ್ಥಿಗಳೆ ಮುಂದೆ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ನಗರದ ಕನಕ ಭವನದಲ್ಲಿ ನಡೆದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಾಳಿದಾಸ, ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ನಿಲಯ ಹಳೆ ವಿದ್ಯಾರ್ಥಿಗಳ ಸಂಘ, ಕರ್ನಾಟಕ ಪ್ರದೇಶ ಕುರುಬರ ಸಂಘ, ರಾಕೇಶ ಸಿದ್ದರಾಮಯ್ಯ ಟ್ರಸ್ಟ ಹಾಗೂ ಕಾಳಿದಾಸ ಶಿಕ್ಷಣ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧರಿತ ಕೋರ್ಸುಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಕಿಟ್ ವಿತರಣೆ ಹಾಗೂ ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳು ಮತ್ತು ತಂತ್ರಜ್ಞಾನಗಳನ್ನು ಕಲಿಯಬೇಕು ಮತ್ತು ಭವಿಷ್ಯದಲ್ಲಿ ಅವುಗಳನ್ನು ಅಳವಡಿಸಿಕೊಳ್ಳಬೇಕು. ಮಕ್ಕಳು ಸಮಾಜದ ಅಭಿವೃದ್ಧಿಗೆ ಸಮಾಜದಲ್ಲಿ ಬದಲಾವಣೆಗಳನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ನೈತಿಕ ಮೌಲ್ಯಗಳ ಸಂರಕ್ಷಕರಾಗಿದ್ದು, ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುತ್ತಾರೆ ಮತ್ತು ಸಂಸ್ಕೃತಿಯನ್ನು ರಕ್ಷಿಸುತ್ತಾರೆ ಎಂದರು.ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಿಕ್ಷಣದ ಬಗ್ಗೆ ಹಗಲಿರಳು ಚಿಂತನೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ರಾಕೇಶ ಸಿದ್ದರಾಮಯ್ಯ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಪ್ರಾಮುಖ್ಯತೆ ಪಡೆದಿದೆ.

ಕುರುಬರ ಸಂಘ ಸ್ಥಾಪನೆಯಾದ ನಂತರ ಜಿಲ್ಲೆಯಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ. ರಾಕೇಶ ಸಿದ್ದರಾಮಯ್ಯ ಅವರ ಸ್ಮರಣೆಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ಮೂಲಕ ಅವರ ಹೆಸರನ್ನು ಅಜರಾಮರಗೊಳಿಸಿದ್ದಾರೆ ಎಂದರು.ವಿಪ ಸದಸ್ಯ ಎಸ್.ವಿ. ಸಂಕನೂರ ಅವರು ಮಾತನಾಡಿ, 21ನೇ ಶತಮಾನ ಜ್ಞಾನಯುಗವಾಗಿದೆ. ಜ್ಞಾನ ಮತ್ತು ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನಮಾನ, ಗೌರವ ಸಿಕ್ಕೇ ಸಿಗುತ್ತದೆ. ವಿದ್ಯೆಗಿಂತ ಮಿಗಿಲಾದ ವಸ್ತು ಯಾವುದು ಇಲ್ಲ, ಶ್ರೀಮಂತಿಕೆ, ಅಧಿಕಾರ ಶಾಶ್ವತವಲ್ಲ ಆದರೆ, ಶಿಕ್ಷಣ ನಮ್ಮ ಕೊನೆಯವರೆಗೂ ಇರುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ