* ಡಿಕೆಶಿ ರಾಹುಲ್ ಗಾಂಧಿ ಭೇಟಿಯ ಬೆನ್ನಲ್ಲೆ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಭೇಟಿ ಸಾಧ್ಯತೆ
* ಮುಂದಿನ ಕೆಲ ದಿನಗಳಲ್ಲೆ ರಾಹುಲ್ ಗಾಂಧಿ ಭೇಟಿಯಾಗಲಿರೋ ಸಿದ್ದರಾಮಯ್ಯ
* ರಾಹುಲ್ ಗಾಂಧಿ ಭೇಟಿಗೆ ಕಾಲಾವಕಾಶ ಕೇಳಿರೋ ಸಿದ್ದರಾಮಯ್ಯ
ಬೆಂಗಳೂರು, (ಜೂನ್.22): ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಬಗ್ಗೆ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು (ಮಂಗಳವಾರ) ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನ ಭೇಟಿಯಾದರು.
ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಜೊತೆ 45 ನಿಮಿಷಗಳ ಕಾಲ ಚರ್ಚೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
undefined
ಸಿದ್ದು ಮುಂದಿನ ಸಿಎಂ ವಿವಾದ: ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ ರವಾನೆ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಇದು ರಾಜಕೀಯ ಮಾಡುವ ಸಮಯವಲ್ಲ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷದ ವರಿಷ್ಠರನ್ನ ಭೇಟಿಯಾಗಿ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಮಾತ್ರ ಮಾಹಿತಿ ನೀಡಿದ್ದೇನೆ. ಪಕ್ಷ ಸಂಘಟನೆ ಹಾಗೂ ವಿರೋಧ ಪಕ್ಷದ ವೈಫಲ್ಯಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ. ಇದು ರಾಜಕೀಯ ಮಾಡುವ ಸಮಯವಲ್ಲ. ಹೀಗಾಗಿ ರಾಜ್ಯದ ಯಾವುದೇ ನಾಯಕರ ಬಗ್ಗೆಯೂ ನಾನು ವರದಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಹುಲ್ ಭೇಟಿಗೆ ಸಮಯ ಕೇಳಿದ ಸಿದ್ದು
ಹೌದು.. ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ರಾಹುಲ್ ಗಾಂಧಿ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ತಿಳಿದುಬಂದಿದೆ.
ಡಿಕೆಶಿ ರಾಹುಲ್ ಭೇಟಿ ಬೆನ್ನಲ್ಲೇ ಸಿದ್ದರಾಮಯ್ಯ ಕೂಡ ಹೈಕಮಾಂಡ್ ನಾಯಕ ಭೇಟಿಗೆ ತೆರಳುತ್ತಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.