'ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿ ಇರುವ ಒಂದು ನಿದರ್ಶನ ತೋರಿಸಿದ್ರೆ ರಾಜಕೀಯ ನಿವೃತ್ತಿ'

By Suvarna NewsFirst Published Apr 11, 2021, 10:16 PM IST
Highlights

ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ.

ರಾಯಚೂರು, (ಏ.11): ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಹಿತರಕ್ಷಣೆಯೊಂದಿಗೆ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದು ಮೀಸಲಾತಿಯನ್ನು ಕಾಪಾಡುತ್ತಿದೆ. ಆದರೆ, ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿ ಇರುವ ಒಂದೇ ಒಂದು ನಿದರ್ಶನ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದರು.

ಜಿಲ್ಲೆಯ ಸಿಂಧನೂರು ನಗರದ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮಾಲೋಚನಾ ಸಭೆ ಹಾಗೂ ಜ್ಯೋತಿಬಾ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾತೆತ್ತಿದರೆ ನಾನು ಬಡವರ ಪರ ಎಂದು ಹೇಳುವ ಯಡಿಯೂರಪ್ಪ ಲಿಂಗಾಯತ ಹಾಗೂ ಒಕ್ಕಲಿಗ ಅಭಿವೃದ್ದಿ ನಿಗಮಗಳಿಗೆ ತಲಾ  500 ಕೋಟಿ ಘೋಷಿಸಿ, 16 ಹಿಂದುಳಿದ ವರ್ಗಗಳ ನಿಗಮಗಳಿಗೆ ಕೇವಲ  120 ಕೋಟಿ ಕೊಟ್ಟಿರುವುದು ಸಾಮಾಜಿಕ ನ್ಯಾಯವೇ ಎಂದು ಪ್ರಶ್ನಿಸಿದರು.

ಹಠಕ್ಕೆ ಬಿದ್ದ ನಾಯಕರು: ಉಪಚುನಾವಣೆ ಗೆಲುವಿಗೆ ಕಾಂಗ್ರೆಸ್ ರಣತಂತ್ರ

978 ರವರೆಗೆ ಭಾರತ ದೇಶದಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಇರಲಿಲ್ಲ. ಈ ಮಧ್ಯೆ ಮೀಸಲಾತಿಗಾಗಿ 1954 ರಲ್ಲಿ ಕಾಕಾ ಕಾಲೇಲ್ಕರ್, 1977 ರಲ್ಲಿ ಬಿ.ಪಿ.ಮಂಡಲ್ ಆಯೋಗ ವರದಿ ಸಲ್ಲಿಸಿತ್ತು. ಅವುಗಳನ್ನು ಬಿಜೆಪಿ ವಿರೋಧಿಸಿತು. 1994 ರಲ್ಲಿ ರಾಜೀವ್‍ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಶೇ 30, ಬಿಸಿಎಂ-ಎ ಮತ್ತು ಬಿಸಿಎಂಬಿಗೆ ಶೇ 6.6, ಹಿಂದುಳಿದ ವರ್ಗಗಳಿಗೆ ಶೇ 26.6, ಎಸ್‍ಸಿ ಮತ್ತು ಎಸ್‍ಟಿ ವರ್ಗದವರಿಗೆ ಶೇ 18 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಲಾಯಿತು. ರಾಜೀವ್‍ಗಾಂಧಿ ಹಿಂದುಳಿದವರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿದ ಫಲವಾಗಿಯೇ ಸಾಕಷ್ಟು ಜನ ಶಾಸಕರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದಾರೆ. ಇದನ್ನು ಯಾರು ಮರೆಯಬಾರದು ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಸ್‍ಇಪಿಟಿ, ಟಿಎಸ್‍ಪಿ ಯೋಜನೆಗೆ ಪ್ರತಿವರ್ಷ 30 ಸಾವಿರ ಕೋಟಿಯಂತೆ ಐದು ವರ್ಷಕ್ಕೆ  86 ಸಾವಿರ ಕೋಟಿ ಅನುದಾನ ನೀಡಲಾಯಿತು. ಆದರೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ವರ್ಷಕ್ಕೆ  26 ಸಾವಿರ ಕೋಟಿ ನೀಡಿ,  4 ಸಾವಿರ ಕೋಟಿ ಕಡಿತಗೊಳಿಸಿದ್ದಾರೆ. ಅಲ್ಲದೆ ಎಸ್‍ಸಿ, ಎಸ್‍ಟಿ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಸಚಿವ ಶ್ರೀರಾಮುಲು ಅಸಹಾಯಕರಾಗಿದ್ದಾರೆ. ಅವರಿಗೆ ವಿರೋಧಿಸುವ ತಾಕತ್ತು ಇಲ್ಲವೆಂದರೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

click me!