ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸವಾಲನ್ನು ಸಿದ್ದರಾಮಯ್ಯ ಅವರು ಸ್ವೀಕರಿಸಿದ್ದಾರೆ.
ಬೆಂಗಳೂರು, (ಸೆ.30): ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬಿ.ವೈ ವಿಜಯೇಂದ್ರ ಅವರ ಮೇಲಿನ ಭ್ರಷ್ಟಾಚಾರ ಆರೋಪವನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿಯಾಗುತ್ತೇನೆ. ಸುಳ್ಳಾದರೇ ವಿರೋಧ ಪಕ್ಷದ ನಾಯಕ ಸ್ಥಾನ ರಾಜೀನಾಮೆ ನೀಡುತ್ತೀರಾ ಎಂದು ಬಿಎಸ್‌ವೈ, ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದರು.
undefined
ಸದನಲ್ಲಿ ಬಿಎಸ್‌ವೈ-ಸಿದ್ದರಾಮಯ್ಯ ವಾಕ್ಸಮರ: ರಾಜೀನಾಮೆ ಸವಾಲು..!
ಇದೀಗ ಆ ಚಾಲೆಂಜನ್ನು ಸಿದ್ದರಾಮಯ್ಯ ಅವರು ಸ್ವೀಕರಿಸಿದ್ದು, ಯಡಿಯೂರಪ್ಪನವರ ಕುಟುಂಬ ಭಾಗಿಯಾಗಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಿ. ಅವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಯಡಿಯೂರಪ್ಪನವರ ಕುಟುಂಬ ಭಾಗಿಯಾಗಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಿ. ಅವರ ಕುಟುಂಬ ಭ್ರಷ್ಟಾಚಾರ ನಡೆಸಿದ್ದು ಸುಳ್ಳು ಎಂದು ತನಿಖೆಯಿಂದ ಸಾಬೀತಾದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. 6/7
— Siddaramaiah (@siddaramaiah)