
ಮೈಸೂರು (ಅ.07): ಮುಡಾ ಅಕ್ರಮ ಸಂಬಂಧ ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ. ಇದು ರಾಜಕೀಯ ಹೇಳಿಕೆಯಲ್ಲ. ನಮ್ಮ ಪಾದಯಾತ್ರೆಯ ಸಮಾರೋಪದಿಂದಲೇ ಅವರ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಿದ್ದ ರಾಮಯ್ಯ ಯಾವುದೇ ಸಂದರ್ಭದಲ್ಲಿಯಾದರೂ ರಾಜೀನಾಮೆ ನೀಡಬಹುದು. ಹೈಕಮಾಂಡ್ ರಾಜೀನಾಮೆ ಪಡೆಯುವ ಚಿಂತನೆ ನಡೆಸಿದೆ. ಹೈಕಮಾಂಡ್ ಏನು ಚರ್ಚೆ ನಡೆಸುತ್ತಿದೆ ಎಂಬುದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ.
ನಮ್ಮ ಉದ್ದೇಶ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಬೇಕು ಎಂಬುದಲ್ಲ, ಬದಲಾಗಿ ಭ್ರಷ್ಟ ಕಾಂಗ್ರೆಸ್ ಮುಖ್ಯಮಂತ್ರಿ ರಾಜ್ಯಕ್ಕೆ ಶಾಪವಾಗಿದ್ದು, ಅವರು ಕೆಳಗಿಳಿಯಬೇಕು ಎಂಬುದಷ್ಟೇ ಆಗಿದೆ ಎಂದರು. ಡಿ.ಕೆ.ಶಿವಕುಮಾರ್‌ಅಷ್ಟೇ ಏಳೆಂಟು ಜನ ಮುಖ್ಯಮಂತ್ರಿ ಹುದ್ದೆ ಮೇಲೆ ಟವಲ್ ಹಾಕಿ ಕೂತಿದಾರೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ನಮಗೆ ಗೊತ್ತಿಲ್ಲ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಆದರೆ, ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸತ್ಯ ಎಂದರು. ಸಿದ್ದರಾಮಯ್ಯನವರು ಈಗ ಮುಖ್ಯಮಂತ್ರಿ, ನಾನೇ ಮುಖ್ಯ ಮಂತ್ರಿ ಎನ್ನುತ್ತಿದ್ದಾರೆ. ಅಂತಹ ಕೆಟ್ಟ ಪರಿಸ್ಥಿತಿ ಅವರಿಗೆ ಬಂದೊದಗಿದೆ.
ಮತ್ತೊಂದು ಕಡೆ ಸಚಿವರು ರಾಜ್ಯ ಪ್ರವಾಸ ಮಾಡುತ್ತಿಲ್ಲ. ಅಭಿವೃದ್ಧಿ ಕೆಲಸಗಳ ಮಾತೇ ಇಲ್ಲ. ಮೇಲ್ನೋ ಟಕ್ಕೆ ಕಾಂಗ್ರೆಸ್‌ನವರು ಸಿದ್ದರಾಮ ಯ್ಯನವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ ಎನ್ನುತ್ತಿದ್ದಾರೆ. ಮತ್ತೊಂದು ಕಡೆ ಸತೀಶ್ ಜಾರಕಿಹೊಳಿ ಅವರನ್ನು ದೆಹಲಿಗೆ ಸಿದ್ದರಾಮಯ್ಯ ಅವರೇ ಕಳುಹಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಮುಡಾದಿಂದ ಪಡೆದ ಹದಿನಾಲ್ಕು ಸೈಟುಗಳನ್ನು ಮರಳಿ ಕೊಡಬೇಕಾದರೆ 64 ಕೋಟಿ ರು.ಕೊಡಿ ಎನ್ನುತ್ತಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಈಗ ಯಾಕೆ ಏಕಾಏಕಿ ಸೈಟು ಹಿಂದಿರು ಗಿಸಿದ್ದಾರೆ? ಮುಡಾ ಪ್ರಕರಣ ಕೇವಲ 14 ಸೈಟ್ ವಿಚಾರದ್ದಲ್ಲ ಸಾವಿರಾರು ಕೋಟಿ ರು. ಇದರಲ್ಲಿ ಲೂಟಿಯಾಗಿದೆ. ಈ ಬಗ್ಗೆ ಸದನದಲ್ಲಿ ಚರ್ಚೆ ಆಯಿತು. ಆಗ ಯಾವುದೇ ಹಗರಣವೇ ಆಗಿಲ್ಲ, ಅದರಬಗ್ಗೆ ಚರ್ಚೆಯ ಅವಶ್ಯಕತೆಯೇ ಇಲ್ಲಎಂದರು.
ಸಿದ್ದರಾಮಯ್ಯ ಪತ್ನಿಯನ್ನು ನಾವು ಹೊರಗೆ ತಂದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಬಳಿಕ ಮುಖ್ಯ ಮಂತ್ರಿ ಅವರೇ ತನಿಖೆಗೆ ಆದೇಶಿಸಿದರು ಎಂದು ಹೇಳಿದರು. ಈಗ ಸಿದ್ದರಾಮಯ್ಯ ಅವರ ಸ್ಥಿತಿ ಎಲ್ಲಿಗೆ ಬಂತು? ಈಗ ಹೇಗೆ ಸಲೀಸಾಗಿ 14 ನಿವೇ ಶನಗಳನ್ನು ವಾಪಸ್ ಕೊಟ್ಟರು.ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾಗಿದೆ. 14 ಸೈಟ್ ಅವರ ಬುಡಕ್ಕೇ ಬಂದಿದೆ ಎಂಬ ಅರಿವಾಗಿದೆ ಎಂದರು. ಇದೇ ವೇಳೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿ ಯಿಸಿ, ಜಿ.ಟಿ.ದೇವೇಗೌಡರನ್ನು ಕೇಳಿಕೊಂಡು ಬಿಜೆಪಿಯವರು ಮೈಸೂರು ಚಲೋ ಪಾದ ಯಾತ್ರೆ ಮಾಡಿಲ್ಲ. ಅದು ವಿಪಕ್ಷಗಳ ಜವಾ ಬ್ದಾರಿ. ಭ್ರಷ್ಟ ಮುಖ್ಯಮಂತ್ರಿ, ಭ್ರಷ್ಟ ಸರ್ಕಾ ರದ ವಿರುದ್ಧ ನಾವು ಪ್ರಾಮಾಣಿಕ ಹೋರಾಟ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.