ಬಿಜೆಪಿ ಸಾಕಷ್ಟು ದಾಖಲೆ, ಪುರಾವೆಗಳೊಂದಿಗೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಹಗರಣಗಳು, ಮುಖ್ಯ ಮಂತ್ರಿ ಅವರ ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾ ಗಿರುವುದರ ವಿರುದ್ದ ಹೋರಾಟ ಮಾಡಿದೆ ಎಂದಿದ್ದಾರೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಜಗ್ಗಿಸುವವರು ಯಾರೂ ಇಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು(ಆ.18): ಮೈಸೂರು ಮುಡಾ ನಿವೇಶನ ಹಗರಣ ದೂರಿನ ಸಂಬಂಧ ರಾಜ್ಯ ಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಸಾಕಷ್ಟು ದಾಖಲೆ, ಪುರಾವೆಗಳೊಂದಿಗೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಹಗರಣಗಳು, ಮುಖ್ಯ ಮಂತ್ರಿ ಅವರ ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾ ಗಿರುವುದರ ವಿರುದ್ದ ಹೋರಾಟ ಮಾಡಿದೆ ಎಂದಿದ್ದಾರೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಜಗ್ಗಿಸುವವರು ಯಾರೂ ಇಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದಾರೆ.
ಮುಡಾ ಹಗರಣ: ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಸಿಎಂ ಸಿದ್ದರಾಮಯ್ಯ
ಈಗಲಾದರೂ ಹಗರಣದ ತನಿಖೆ ಪಾರದಾರ್ಶಕವಾಗಿ ನಡೆಯಲು ಅನುವಾಗುವಂತೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.