ನೈತಿಕ ಹೊಣೆಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಂ.ಪಿ.ರೇಣುಕಾಚಾರ್ಯ

By Govindaraj SFirst Published Feb 11, 2024, 7:23 AM IST
Highlights

ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ.40 ಸರ್ಕಾರವೆಂದು ಆರೋಪ ಮಾಡಿದ್ದು, ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. 

ದಾವಣಗೆರೆ (ಫೆ.11): ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ.40 ಸರ್ಕಾರವೆಂದು ಆರೋಪ ಮಾಡಿದ್ದು, ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಳ್ಳು ಹೇಳುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ 9 ತಿಂಗಳಾದರೂ ಟೇಕಾಫ್ ಆಗಿಲ್ಲ. ಅಷ್ಟರಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರವೆಂದು ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದರು.

ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರ, ಪೇ ಸಿಎಂ ಅಂತೆಲ್ಲಾ ಕಾಂಗ್ರೆಸ್ಸಿಗರು ಆರೋಪ ಮಾಡಿದ್ದರು. ಈಗ ಅದೇ ಕೆಂಪಣ್ಣ ಕಾಂಗ್ರೆಸ್‌ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರವೆಂದು, ಯಾವುದೇ ಬಿಲ್ ಕೂಡ ಬಿಡುಗಡೆಯಾಗಿಲ್ಲವೆಂಬ ಆರೋಪ ಮಾಡಿದ್ದಾರೆ. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ಗೆ ಡಾಕ್ಟರೇಟ್‌ ನೀಡಬೇಕು. ಗುತ್ತಿಗೆದಾರರ ಸಂಘದವರೇ ಆರೋಪ ಮಾಡಿದ್ದರೂ ಸ್ಪಷ್ಟ ಪ್ರತಿಕ್ರಿಯೆ ಕಾಂಗ್ರೆಸ್‌ನವರು ನೀಡುತ್ತಿಲ್ಲ. ಅಭಿವೃದ್ಧಿ ಮರೆತು, ಕಾಂಗ್ರೆಸ್ ಸರ್ಕಾರ ಆಡಳಿತ ಮಾಡುತ್ತಿದೆ. 

ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ದೇಶದಲ್ಲಿ ಆರ್ಥಿಕ ಸಂಕಷ್ಟ: ಸಚಿವ ಕೆ.ಜೆ.ಜಾರ್ಜ್‌

ಬಿಜೆಪಿ ಸರ್ಕಾರವು ಕೆಲಸವನ್ನು ಮಾಡುತ್ತಿತ್ತು. ಈಗ ಏನು ಕೆಲಸಗಳೇ ಆಗುತ್ತಿಲ್ಲವೆಂದು ಸ್ವತಃ ಅಧಿಕಾರಸ್ಥ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಕಾಂಗ್ರೆಸ್ಸಿನ ಗ್ಯಾರಂಟಿಗಳೂ ವೈಫಲ್ಯ ಕಂಡಿವೆ. ರೈತರಿಗೆ ಬರ ಪರಿಹಾರ ನೀಡುವಲ್ಲೂ ಸಿದ್ದರಾಮಯ್ಯ ಸರ್ಕಾರ ವಿಫಲರಾಗಿದೆ ಎಂದು ಕುಟುಕಿದರು. ಪಕ್ಷದ ಹಿರಿಯ ಮುಖಂಡರಾದ ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ರಾಜು ವೀರಣ್ಣ, ಪ್ರವೀಣ ಜಾಧವ್‌, ನೆಲಹೊನ್ನೆ ಮಂಜಣ್ಣ, ಫಿಶ್ ಬಸಣ್ಣ, ದಯಾನಂದ, ಜಯಣ್ಣ, ಮೋಹನ್, ಪ್ರತಾಪ್, ಅಣಜಿ ಬಸವರಾಜ, ಉಮ್ಮಣ್ಣ ಇತರರಿದ್ದರು.

ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಇಲ್ಲ: ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಛಿದ್ರಛಿದ್ರವಾಗಲಿದೆ. ಐಎನ್‌ಡಿಐಎ ಒಕ್ಕೂಟದಿಂದ ಎಲ್ಲರೂ ಹೊರ ಬಂದಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಸಚಿವರನ್ನೇ ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ಯೋಜನೆ ರೂಪಿಸಿಕೊಂಡಿದೆ. ಈಗಾಗಲೇ ಕಾಂಗ್ರೆಸ್‌ ನವರೇ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗುತ್ತದೆಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ಯದ 28 ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಕಾಣಲಿದೆ.

ಮಂಗನಕಾಯಿಲೆಗೆ ವರ್ಷದೊಳಗೆ ವ್ಯಾಕ್ಸಿನ್: ಸಚಿವ ದಿನೇಶ್ ಗುಂಡೂರಾವ್

ಈಶ್ವರಪ್ಪ ಹೇಳಿಕೆಗೆ ರೇಣುಕಾಚಾರ್ಯ ಸಮರ್ಥನೆ: ದೇಶ ವಿಭಜನೆ ಮಾಡಬೇಕೆಂದರೆ ಯಾರು ಸುಮ್ಮನಿರುತ್ತಾರೆ? ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಹೀಗೆಲ್ಲಾ ಮಾತನಾಡುತ್ತಾ ಹೋಗುತ್ತಿದೆ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಟ್ಟಾ ಹಿಂದುತ್ವವಾದಿಯಾಗಿದ್ದು, ಕಾಂಗ್ರೆಸ್‌ ವಿರುದ್ಧ ಇರುವುದನ್ನೇ ಹೇಳಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರದ ವಿರುದ್ಧ ಸುಳ್ಳು ಆರೋಪಗಳ ಮಾಡಿ, ದೆಹಲಿಗೆ ಹೋಗಿ ಪ್ರತಿಭಟನೆಗಳ ನಡೆಸಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ತಮ್ಮ ಸರ್ಕಾರದ ದುರಾಡಳಿತ ಮುಚ್ಚಿಕೊಳ್ಳಲು ವ್ಯರ್ಥ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

click me!