ಮುಡಾ ಪ್ರಕರಣದಿಂದ ಪಕ್ಷಕ್ಕೆ ಸಮಸ್ಯೆಯಾಗುತ್ತಿದೆ. ಹರ್ಯಾಣ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಡಾ ಪ್ರಕರಣದ ಬಗ್ಗೆ ಸಾಕಷ್ಟು ಪ್ರಚಾರ ಮಾಡಿದ್ದರು. ಪದೇ ಪದೇ ಅದರ ಬಗ್ಗೆ ಪ್ರಚಾರ ಮಾಡಿದ್ದು, ಫಲಿತಾಂಶದ ಮೇಲೆ ಪ್ರಭಾವ ಬೀರಿದೆ. ನಾನು ಸಕ್ರಿಯ ರಾಜಕಾರಣದಲ್ಲಿಲ್ಲ. ಆದರೆ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದ ಕಾಂಗ್ರೆಸ್ ನಾಯಕ ಕೆ.ಬಿ. ಕೋಳಿವಾಡ
ಬೆಂಗಳೂರು(ಅ.09): ಮುಡಾ ಪ್ರಕರಣವು ಹರ್ಯಾಣ ಚುನಾವಣೆ ಮೇಲೆ ಪ್ರಭಾವ ಬೀರಿದ್ದು, ಅದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಕೆ.ಬಿ. ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಪಕ್ಷಕ್ಕೆ ಸಮಸ್ಯೆಯಾಗುತ್ತಿದೆ. ಹರ್ಯಾಣ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಡಾ ಪ್ರಕರಣದ ಬಗ್ಗೆ ಸಾಕಷ್ಟು ಪ್ರಚಾರ ಮಾಡಿದ್ದರು. ಪದೇ ಪದೇ ಅದರ ಬಗ್ಗೆ ಪ್ರಚಾರ ಮಾಡಿದ್ದು, ಫಲಿತಾಂಶದ ಮೇಲೆ ಪ್ರಭಾವ ಬೀರಿದೆ. ನಾನು ಸಕ್ರಿಯ ರಾಜಕಾರಣದಲ್ಲಿಲ್ಲ. ಆದರೆ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದರು.
undefined
ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ
ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು:
ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ಸಿಎಂ ಸ್ನಾನಕ್ಕೆ ರಾಜೀನಾಮೆ ನೀಡುವಂತೆ ಪುನರುಚ್ಚರಿಸಿದ ಕೆ.ಬಿ. ಕೋಳಿವಾಡ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಈಹಿಂದೆಯೂ ಅದನ್ನು ಹೇಳಿದ್ದೆ. ಈಗಲೂ ನನ್ನ ಹೇಳಿಕೆಗೆನಾನು ಬದ್ದನಾಗಿದ್ದೇನೆ. ಪಕ್ಷಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿದ್ದರೆ ನನಗೆ ನೋಟಿಸ್ ಕೊಡುತ್ತಾರೆ. ನಾನು ಪಕ್ಷದ ಹಿತದೃಷ್ಟಿಯಿಂದಷ್ಟೇ ಹೇಳುತ್ತಿದ್ದೇನೆ ಎಂದು ತಿಳಿಸಿದರು.