ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಬೇಕು: ಸಿ.ಟಿ.ರವಿ

Published : Aug 18, 2024, 07:20 AM IST
ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಬೇಕು: ಸಿ.ಟಿ.ರವಿ

ಸಾರಾಂಶ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು. 

ಚಿಕ್ಕಮಗಳೂರು (ಆ.18): ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧವೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇಂಥ ಸಂದರ್ಭ ಹಿಂದೆ ಬಂದಾಗ ಅಂದು ಸಿಎಂ ಆಗಿದ್ದವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ಹೇಳಿದರು.

ರಾಮಕೃಷ್ಣ ಹೆಗ್ಡೆ ಅವರ ಮೇಲೆ ವಿವಿಧ ಹಗರಣಗಳ ಆರೋಪ ಬಂದಾಗ ರಾಜಿನಾಮೆ ನೀಡಿದ್ದರು. ಬಿ.ಎಸ್. ಯಡೀಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ತಕ್ಷಣ ರಾಜಿನಾಮೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವವರಾಗಿದ್ದು, ಆ ಮೇಲ್ಪಂಕ್ತಿಯನ್ನು ಪಾಲಿಸುತ್ತಾರೆಂಬ ನಂಬಿಕೆ ಇದೆ ಎಂದರು. ರಾಜ್ಯದ ರಾಜಕೀಯ ನಾಯಕರು ಅನುಸರಿಸಿರುವ ನೈತಿಕ ಮೌಲ್ಯವನ್ನು ಸಿದ್ದರಾಮಯ್ಯ ಅವರೂ ಎತ್ತಿ ಹಿಡಿಯಬೇಕು ಎಂದು ವಿನಂತಿಸುತ್ತೇನೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದರು.

ಚಿಕ್ಕಮಗಳೂರು ನಗರಸಭೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಫಿಕ್ಸ್, ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

ಮೆಡಿಕಲ್ ಕಾಲೇಜನ್ನು ಮಂಜೂರು ಮಾಡಿಸಿದ್ದು ಯಾರವ್ವಾ?: ಕುರುಡರಿಗೆ ಏನು ಮಾಡಿ ತೋರಿಸಿದರೂ ಅದು ಕಾಣುವುದಿಲ್ಲ. ಗಾಯತ್ರಿ ಶಾಂತೇಗೌಡರು ತಮ್ಮ ರಾಜಕೀಯದ ದೃಷ್ಟಿದೋಷದಿಂದ ಹೊರ ಬಂದು ನೋಡಿದರೆ ನಾನು ಶಾಸಕನಾಗಿ ಏನು ಮಾಡಿದ್ದೇನೆ ಎಂಬುದು ಕಾಣುತ್ತದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಖಾರವಾಗಿ ಟಾಂಗ್ ನೀಡಿದರು. ಕಡೂರು ತಾಲೂಕಿನ ಸಖರಾಯಪಟ್ಟಣದ ಅಯ್ಯನಕೆರೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಮ್ಮ ಬಿಜೆಪಿ ಮುಖಂಡರೊಂದಿಗೆ ಬಾಗಿನ ಅರ್ಪಿಸಿ ಮಾತನಾಡಿದರು. ನಾಲ್ಕು ಭಾರಿ ಶಾಸಕರಾಗಿದ್ದ ಸಿ.ಟಿ ರವಿ ಅವರು, 

ಚಿಕ್ಕಮಗಳೂರು ಕ್ಷೇತ್ರಕ್ಕೆ ಯಾವುದೇ ಅಭಿವೃದ್ದಿ ಕಾರ್ಯ ಮಾಡಿಲ್ಲ ಎಂಬ ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಜಿಲ್ಲಾ ಕೇಂದ್ರಕ್ಕೆ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡಿಸಿದ್ದು ಯಾರವ್ವಾ, ಕೆರೆ ತುಂಬಿಸುವ ಯೋಜನೆಗೆ 1281 ಕೋಟಿ ರು. ಯಾರು ತಂದರು?, ಕಡೂರು- ಚಿಕ್ಕಮಗಳೂರು ರಸ್ತೆ, ಚಿಕ್ಕಮಗಳೂರು- ಬೇಲೂರು, ಚಿಕ್ಕಮಗಳೂರು- ಹಾಸನದ ರಸ್ತೆ ಅಭಿವೃದ್ಧಿ ಮಾಡಿಸಿದ್ದು ಯಾರು ತಾಯಿ ಎಂದು ಕುಟುಕಿದರು.

32 ಕೋಟಿ ರು.ನ ಬಸವನಹಳ್ಳಿ ಕೆರೆ ಕಾಮಗಾರಿಯಲ್ಲಿ ಕಲ್ಲು ಹಾಕಿ ಭ್ರಷ್ಟಾಚಾರ ನಡೆದಿದೆ ಎಂದು ಅಪಪ್ರಚಾರ ಮಾಡಿ ಕಾಮಗಾರಿ ನಿಲ್ಲಿಸಿದವರು ಯಾರು ಎಂದು ಪ್ರಶ್ನಿಸಿ, ವಿಘ್ನ ಸಂತೋಷಿಗಳು ಕಾಮಗಾರಿಗೆ ಅಡ್ಡಿಪಡಿಸಿದರು. ನೂತನ ಡೀಸಿ ಕಟ್ಟಡ ಮಂಜೂರು ಮಾಡಿಸಿದ್ದು, ಕೋರ್ಟ್ ಕಟ್ಟಡ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಯಾರು ತಾಯಿ ಮಾಡಿಸಿದ್ದು ಎಂದು ಪ್ರಶ್ನಿಸಿದರು.? ರಾಜಕೀಯವಾಗಿ ತಮಗೆ ಆಗಿರುವ ದೃಷ್ಟಿ ದೋಷವನ್ನು ಸರಿಪಡಿಸಿಕೊಂಡು ನೋಡಿದರೆ ಎಲ್ಲವೂ ಕಾಣುತ್ತದೆ ಎಂದು ಸಲಹೆ ನೀಡಿದರು.

ಸರ್ಕಾರಿ ಭೂಮಿ ಗುತ್ತಿಗೆ ನೀಡುವ ಪ್ರಕ್ರಿಯೆ ಆರಂಭ: ಕಾಫಿನಾಡಿನಿಂದಲೇ ಒತ್ತುವರಿ ಭೂಮಿ ನಿರ್ಧಾರಕ್ಕೆ ಚಾಲನೆ

ಹಿಂದೆ ಸರಕಾರಿ ಹುದ್ದೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಿರಲಿಲ್ಲ. ವರ್ಗಾವಣೆಗೆ ಹಣ ತೆಗೆದುಕೊಂಡು ನನಗೆ ಅಭ್ಯಾಸವಿಲ್ಲ. ಈಗ ಲೆಟರ್‌ಗೆ ದುಡ್ಡು ಎಂಬ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಕರ ಕ್ಷೇತ್ರದಲ್ಲೂ ಭ್ರಷ್ಟಾಚಾರ ನಡೆಯಿತು ಎಂದು ಹೇಳಿ, ನಾವು ವಾಜಪೇಯಿ ಬಡಾವಣೆ ನಿರ್ಮಾಣ ಮಾಡಿದ್ದೇವೆ ಈ ರೀತಿ ಬಹಳಷ್ಟು ಇದ್ದು ಅಭಿವೃದ್ಧಿ ಕಾರ್ಯ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು. ಎಲ್ಲೆಡೆ ಉತ್ತಮ ಮಳೆ ಬಂದಿರುವ ಕಾರಣದಿಂದ ಕೆರೆಕಟ್ಟೆಗಳಲ್ಲಿ ನೀರು ತುಂಬಿರುವುದು ಸಂತಸ ಸಂಗತಿ. ಹಾಗಾಗಿ ಕೆರೆಗೆ ಬಾಗಿನ ಅರ್ಪಿಸಿ ನಮ್ಮ ಕೃತಜ್ಞತೆ ಸಲ್ಲಿಸುತ್ತಿದ್ದು, ಗಿಡ, ಮರ, ಪ್ರಕೃತಿಯು ದೇವರೆಂದು ಪೂಜಿಸುತ್ತೇವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!