
ಬೆಂಗಳೂರು (ಮಾ.22): ‘ಎಲ್ಲೆಲ್ಲೋ ಹೀಗೆ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡಲು 90 ಜೊತೆ ಬಟ್ಟೆಖರೀದಿಸಿದ್ದೇನೆ. ಇನ್ನೂ 19 ಸಿ.ಡಿ. ಇದೆಯಂತೆ ಹೀಗಾಗಿ ಎಲ್ಲವೂ ಹಿಡಿತದಲ್ಲಿರಲಿ.
ನಾಲಿಗೆ ಕೂಡ’ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘ಸಿದ್ದರಾಮಯ್ಯ ಪಕ್ಷ ಬಿಡಲಿದ್ದಾರೆ. ಹೀಗಾಗಿ 90 ಜೊತೆ ಬಟ್ಟೆಖರೀದಿಸಿದ್ದಾರೆ’ ಎಂದು ಹೇಳಿಕೆ ನೀಡಿದ್ದರು.
ರಾಸಲೀಲೆ ಸಿಡಿ ಕೇಸ್ : ಮತ್ತೊಂದು ವಿಡಿಯೋ ರಿಲೀಸ್ ...
ಇದಕ್ಕೆ ಪ್ರತಿಕ್ರಿಯಿಸಿ, ‘ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆದಾನ ಮಾಡುತ್ತೇನೆ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ. ನಾಲಗೆ ಕೂಡ’ ಎಂದು ಹೇಳಿದ್ದಾರೆ.
ಮಸ್ಕಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ‘ಜೆಡಿಎಸ್ ತೊರೆದು ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವುದರಿಂದ ಸಿದ್ದರಾಮಯ್ಯ ಇನ್ನೊಂದು ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ’ ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.