
ಮೈಸೂರು(ಮೇ.11): ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಬುಧವಾರ ನಡೆಯಿತು. ಅವನೊಬ್ಬ ಮೋಸಗಾರ. ಅವನು ಇಂಥವನು ಅಂತ ಗೊತ್ತಿದ್ದರೆ ನಮ್ಮ ಹುಡುಗನನ್ನೇ ನಿಲ್ಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಭ್ಯರ್ಥಿ ವರ್ತನೆ ಕುರಿತು ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಳಿ ಆಕ್ಷೇಪ ವ್ಯಕ್ತಪಡಿಸಿದಾಗ ಸಿದ್ದರಾಮಯ್ಯ ಕೂಡ ಸಿದ್ದೇಗೌಡ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಮಾವಿನಹಳ್ಳಿ ಸಿದ್ದೇಗೌಡ ಒಬ್ಬ ಮೋಸಗಾರ ಎಂದು ಕಿಡಿಕಾರಿದರು.
KARNATAKA ELECTION 2023: 130-150 ಸ್ಥಾನಗಳಲ್ಲಿ ಗೆಲ್ತೀವಿ, ಸಿದ್ದರಾಮಯ್ಯ
ಜೆಡಿಎಸ್‌ನವರಿಂದ ಬಿಜೆಪಿಗೆ ಬೆಂಬಲ:
ವರುಣದಲ್ಲಿ ಜೆಡಿಎಸ್‌ನವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಸುಲಭವಾಗಿ ಗೆಲುವು ದಾಖಲಿಸಲಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಅಷ್ಟೇ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ನೇರವಾಗಿ ನಮ್ಮ ಜೊತೆ ಪೈಪೋಟಿಯಲ್ಲಿಲ್ಲ. ಸೋಮಣ್ಣ ಅವರಿಗೆ ವರುಣದ ಜನ ಯಾಕೆ ಮತ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಮುಂದಿಟ್ಟುಕೊಂಡು ಮತಕೇಳಿದ್ದಾರೆ. ಅದು ಬಿಟ್ಟರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಎಂದರು.
ನಮಗೆ ಬಹುಮತ ಬರೋದ ಖಚಿತವಾಗಿದೆ. ಅದನ್ನೇ ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳ್ತಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರೋದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ ಅಂತ ತಿಳಿಸಿದ್ದಾರೆ.
ಭಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ, ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದ್ರು. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ?, ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದ್ರು ಅಂತ ಹೇಳಿದ್ದಾರೆ.
Karnataka Election 2023: 130-150 ಸ್ಥಾನಗಳಲ್ಲಿ ಗೆಲ್ತೀವಿ, ಸಿದ್ದರಾಮಯ್ಯ
ವರುಣಾದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ದಾಖಲಿಸಿಲಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಪೈಪೋಟಿ ಇದೆ. ಇಲ್ಲಿ ಬಿಜೆಪಿ ಎಲ್ಲೂ ಕೂಡ ನೇರವಾಗಿ ನಮ್ಮ ಜೊತೆ ಪೈಪೋಟಿ ಇಲ್ಲ. ಸೋಮಣ್ಣಗೆ ವರುಣಾ ಜನ ಯಾಕೆ ವೋಟ್ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು?. ಅವರು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ, ಅದು ಬಿಟ್ಡರೆ ದುಡ್ಡಿನ ರಾಜಕೀಯ ಮಾಡಿದ್ದಾರೆ ಅಂತ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ವರದಿಗಾರನಿಗೆ ಸಿದ್ದು ಫುಲ್ ಕ್ಲಾಸ್
ರಾಷ್ಟ್ರೀಯ ಮಾಧ್ಯಮದ ವರದಿಗಾರನಿಗೆ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದಕೊಂಡ ಘಟನೆ ನಡಿದಿದೆ. ರೆಸಾರ್ಟ್ ರಾಜಕೀಯದ ಅವಶ್ಯಕತೆ ಇದ್ಯಾ?. ನಿಮ್ಮ ಶಾಸಕರನ್ನು ಹೇಗೆ ರಕ್ಷಿಸಿಕೊಳ್ಳುತ್ತಿರಾ ಎಂದು ಪ್ರಶ್ನಿಸಿದ ರಾಷ್ಟ್ರೀಯ ಮಾಧ್ಯಮದ ವರದಿಗಾರನ ಮೇಲೆ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದರು. ಎಲ್ಲರೂ ಬಹುಮತ ಕೊಡುತ್ತಿರುವಾಗ ಶಾಸಕರ ರಕ್ಷಣೆ ಎಲ್ಲಿಂದ ಬರುತ್ತದೆ. ಯಾಕೆ ಇಂತಹ ಪ್ರಶ್ನೆ ಕೇಳಿ ಸುದ್ದಿ ಹಬ್ಬಿಸುತ್ತೀರಾ?. ನೀನೇನು ಬಿಜೆಪಿ ವ್ಯಕ್ತಿನಾ, ನಿನೇಗೇಕೆ ಇಂತಹ ಅನುಮಾನಗಳು ಬರಬೇಕು. ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರಸ್‌ಗೆ ಬಹುಮತ ಇದೆ. ನಾವು ಬಹುಮತದೊಂದಿಗೆ ಸರ್ಕಾರ ಮಾಡುತ್ತೇವೆ. ಇಂತಹ ಪ್ರಶ್ನೆಗಳನ್ನ ಕೇಳಿ ಗೊಂದಲದ ಸುದ್ದಿಗಳನ್ನ ಹಬ್ಬಿಸಬೇಡ. ನೀನು ಇನ್ಮುಂದೆ ನನ್ನ ಮುಂದೆ ಪ್ರಶ್ನೆ ಕೇಳಲು ಬರಬೇಡ ಅಂತ ಸಿದ್ದು ಫುಲ್ ಗರಂ ಉತ್ತರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.