Haveri: ಸಬ್ ಕಾ ಸಾತ್ ಸಬ್ ಕಾ ನಾಶ್ ಮಾಡಿದ್ದಾರೆ ನರೇಂದ್ರ ಮೋದಿ: ಸಿದ್ದರಾಮಯ್ಯ

Published : Jun 08, 2022, 11:17 PM IST
Haveri: ಸಬ್ ಕಾ ಸಾತ್ ಸಬ್ ಕಾ ನಾಶ್ ಮಾಡಿದ್ದಾರೆ ನರೇಂದ್ರ ಮೋದಿ: ಸಿದ್ದರಾಮಯ್ಯ

ಸಾರಾಂಶ

ಬಿಎಸ್‌ವೈ, ಬೊಮ್ಮಾಯಿ ನೇತೃತ್ವದ ಸರ್ಕಾರ ಈ ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಮನೆಯನ್ನೂ ಕಟ್ಟಿಸಿಕೊಟ್ಟಿಲ್ಲ. ಬಡವರಿಗೆ ಸೂರು ಕೊಡದ ದರಿದ್ರ ಸರ್ಕಾರ ರಾಜ್ಯದಲ್ಲಿ ಇರಬೇಕಾ? ಇಂಥ ಕೆಟ್ಟ ಸರ್ಕಾರವನ್ನು ಇತಿಹಾಸದಲ್ಲೇ ನೋಡಿರಲಿಲ್ಲ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ 

ಹಾವೇರಿ (ಜೂ.08): ‘ನಾನು ಮುಖ್ಯಮಂತ್ರಿಯಾಗಿದ್ದಾಗ 15 ಲಕ್ಷ ಮನೆಗಳನ್ನು ಬಡವರಿಗೆ ಕಟ್ಟಿಸಿಕೊಟ್ಟಿದ್ದೆ. ಬಿಎಸ್‌ವೈ, ಬೊಮ್ಮಾಯಿ ನೇತೃತ್ವದ ಸರ್ಕಾರ ಈ ನಾಲ್ಕು ವರ್ಷಗಳಲ್ಲಿ ಒಂದೇ ಒಂದು ಮನೆಯನ್ನೂ ಕಟ್ಟಿಸಿಕೊಟ್ಟಿಲ್ಲ. ಬಡವರಿಗೆ ಸೂರು ಕೊಡದ ದರಿದ್ರ ಸರ್ಕಾರ ರಾಜ್ಯದಲ್ಲಿ ಇರಬೇಕಾ? ಇಂಥ ಕೆಟ್ಟ ಸರ್ಕಾರವನ್ನು ಇತಿಹಾಸದಲ್ಲೇ ನೋಡಿರಲಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.  ಹಾವೇರಿ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಬುಧವಾರ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಸವರಾಜ ಗುರಿಕಾರ ಪರ ಮತಯಾಚಿಸಿ ಅವರು ಮಾತನಾಡಿದರು. 

ಸಾಧನೆಯ ಪಟ್ಟಿ ಕೊಡಿ: ನಾವು ಏನು ಮಾಡಿದ್ದೇವೆ ಎಂಬ ಬಗ್ಗೆ ಸಾಧನೆಯ ಪಟ್ಟಿ ಕೊಡುತ್ತೇವೆ. ಬಿಜೆಪಿಯವರು ಬೆಲೆ ಏರಿಕೆ, ಸಾಲ ಹೆಚ್ಚಳ, ಬಡವರಿಗೆ ಮನೆ ಕೊಟ್ಟಿಲ್ಲ, ಶೇ 40ರಷ್ಟು ಕಮಿಷನ್‌ ಪಡೆದಿದ್ದೇವೆ ಅಂತ ಪಟ್ಟಿ ಕೊಡಬೇಕಷ್ಟೆ ಎಂದು ವ್ಯಂಗ್ಯವಾಡಿದರು. ರಾಜ್ಯದ ಉಳಿವಿಗಾಗಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರವನ್ನು ಕೈಗೊಳ್ಳಿ ಎಂದು ಹೇಳಿದರು. 

Panchamasali Reservation; ಬೊಮ್ಮಾಯಿ ಮುಂದೆ 3 ಆಯ್ಕೆಯಿಟ್ಟ ಜಯ ಮೃತ್ಯುಂಜಯ ಸ್ವಾಮೀಜಿ

ಸಾಲದ ಹೊರೆ: 2018ರವರೆಗೆ ರಾಜ್ಯದ ಮೇಲೆ ₹2.42 ಲಕ್ಷ ಕೋಟಿ ಸಾಲ ಇತ್ತು. 2023ರ ವೇಳೆಗೆ ₹5.40 ಲಕ್ಷ ಕೋಟಿಗೆ ಹೆಚ್ಚಳವಾಗಿದೆ. ಅಂದರೆ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ₹3 ಲಕ್ಷ ಕೋಟಿ ಸಾಲ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು 8 ವರ್ಷಗಳಲ್ಲಿ ₹102 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ‘ಅಚ್ಛೇ ದಿನ್‌’ ಅಂದರೆ ಇದೇನಾ? ಎಂದು ಪ್ರಶ್ನಿಸುವ ಮೂಲಕ ಅಂಕಿ ಅಂಶ ಸಹಿತ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 

ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರ ಹಿಜಾಬ್‌, ಹಲಾಲ್‌, ಅಜಾನ್‌, ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಮುಂತಾದ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಕೋಮುದ್ವೇಷ ಹರಡುವ ಕೆಲಸ ಮಾಡುತ್ತಿದೆ. ಈ ವಿಧಾನ ಪರಿಷತ್‌ ಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆಗೆ ನಾಂದಿಯಾಗುತ್ತದೆ. ಕೊನೆಗಾಲದಲ್ಲಿ ಬಿಜೆಪಿ ಸೇರುವ ಮೂಲಕ ಬಸವರಾಜ ಹೊರಟ್ಟಿ ಅವರು ‘ರಾತ್ರಿ ನೋಡಿದ ಬಾವಿಗೆ ಹಗಲು ಬಿದ್ದಿದ್ದಾರೆ’ ಎಂದು ಕಾಲೆಳೆದರು.

Haveri; ಮದುವೆ ಸಿದ್ಧತೆಯಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ, 4 ಕುರಿಗಳ ಸಾವು

ಚರಿತ್ರೆಯನ್ನೇ ತಿರುಚಿದ್ದಾರೆ: ಬಸವಣ್ಣ, ಅಂಬೇಡ್ಕರ್‌, ನಾರಾಯಣಗುರು, ಕುವೆಂಪು, ಭಗತ್‌ಸಿಂಗ್‌ ಇವರ್‍ಯಾರು ಹಿಂದೂಗಳಲ್ವಾ? ಇವರ ಪಠ್ಯಗಳಿಗೆ ಬಿಜೆಪಿ ಸರ್ಕಾರ ಕತ್ತರಿ ಹಾಕಿದೆ. ವೈದಿಕ ಧರ್ಮ ವಿರೋಧಿಸಿ ಲಿಂಗಾಯತ ಧರ್ಮ ಸ್ಥಾಪಿಸಿದ್ದ ಬಸವಣ್ಣ, ವಿಶ್ವಮಾನವ ಕಲ್ಪನೆ ನೀಡಿದ ಕುವೆಂಪು ಅವರ ಚರಿತ್ರೆಯನ್ನೇ ತಿರುಚಲು ಹೊರಟಿದ್ದಾರೆ. ಪಠ್ಯ ಪುಸ್ತಕಗಳು ಕೇಸರೀಕರಣವಾಗುತ್ತಿವೆ ಎಂದು ಸಾಹಿತಿ, ಸ್ವಾಮೀಜಿಗಳೇ ಹೇಳುತ್ತಿದ್ದಾರೆ. ವೈದಿಕ ಧರ್ಮ ಸ್ಥಾಪಿಸುವ, ಕೇಸರೀಕರಣಗೊಳಿಸುವ ಹುನ್ನಾರ, ಷಡ್ಯಂತ್ರಗಳನ್ನು ತಡೆಯಬೇಕಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ