
ಬೆಂಗಳೂರು(ಏ.11): ಮುಂದಿನ ವಿಧಾನಸಭೆ ಚುನಾವಣೆಗೆ(Karnataka Assembly Election) ಬಿಜೆಪಿ ಅಭ್ಯರ್ಥಿ ಆಯ್ಕೆಗಾಗಿ ಹೈಕಮಾಂಡ್ ನಿಗದಿಪಡಿಸಿರುವ ಮಾನದಂಡಗಳಡಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದರೆ ಸಚಿವರ ಜೊತೆಗೆ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯವಿದೆ. ಆದರೆ, ಬಿಜೆಪಿಗೆ ನುಡಿದಂತೆ ನಡೆಯುವ ಅಭ್ಯಾಸವಿರಬೇಕಲ್ಲ? ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಭ್ಯರ್ಥಿ ಆಯ್ಕೆ ಮಾಡಲು ಹೈಕಮಾಂಡ್ ಮೂರು ತಂಡಗಳನ್ನು ರಚಿಸಿದೆ. ಹಾಲಿ ಶಾಸಕರ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣ ಹಾಗೂ ಜನಪ್ರಿಯತೆಯ ಮಾನದಂಡಗಳನ್ನು ನಿಗದಿ ಮಾಡಿದ್ದು, ಈ ಪರೀಕ್ಷೆಯಲ್ಲಿ ಬಿಜೆಪಿಯ ಯಾವೊಬ್ಬ ಹಾಲಿ ಶಾಸಕರಾದರೂ ಪಾಸಾಗಲು ಸಾಧ್ಯವೇ? ಈ ಮಾನದಂಡ ನೋಡಿದರೆ ಬಿಜೆಪಿಗೆ(BJP) ಅಭ್ಯರ್ಥಿಗಳ ವಿಚಾರದಲ್ಲಿ ತೀವ್ರ ತತ್ವಾರ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು ಸಚಿವರ ಕಾರ್ಯ ನಿರ್ವಹಣೆ, ಸುಧಾರಣೆ ಹಾಗೂ ಬದಲಾವಣೆಗಳ ಮಾನದಂಡದಡಿ ಟಿಕೆಟ್ ನೀಡಲಿದೆಯಂತೆ. ಈ ಮಾನದಂಡದ ಪ್ರಕಾರ ಸಚಿವರು ಮಾತ್ರವಲ್ಲ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bmmai) ಅವರೇ ಟಿಕೆಟ್ ಕಳೆದುಕೊಳ್ಳುವ ಅಪಾಯವಿದೆ ಎಂದು ವ್ಯಂಗ್ಯವಾಡಿದ್ದಾರೆ.
ಅಮಿತ್ ಶಾ ಹೇಳಿಕೆ ಸಾಂಸ್ಕೃತಿಕ ಭಯೋತ್ಪಾದನೆ ಎಂದ ಸಿದ್ದರಾಮಯ್ಯ
ಬಿಜೆಪಿ ಶಾಸಕರಿಗೆ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣದ ಬದಲು ಶೇ.40ಕ್ಕಿಂತ ಹೆಚ್ಚು ಕಮಿಷನ್ ಪಡೆದವರು, ಹಿಜಾಬ್, ಹಲಾಲ್, ಮೊದಲಾದ ವಿವಾದಗಳಿಂದ ಸಮಾಜದಲ್ಲಿ ಹೆಚ್ಚು ವೈಷಮ್ಯವನ್ನು ಹುಟ್ಟಿಸಿದವರು ಮತ್ತು ಅತೀ ಹೆಚ್ಚು ಸುಳ್ಳು ಹೇಳಿದವರು ಯಾರು? ಎಂಬ ಮಾನದಂಡಗಳನ್ನು ನಿಗದಿಪಡಿಸಿದರೆ ಬಿಜೆಪಿಯ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ ಎಂದು ಲೇವಡಿ ಮಾಡಿದ್ದಾರೆ.
ಪುಂಡರ ಕೈಗೊಂಬೆ ಸಿಎಂ!
ಬೆಂಗಳೂರು: ಧಾರವಾಡದಲ್ಲಿ ಮುಸ್ಲಿಂ(Muslim) ವರ್ತಕನ ಮೇಲೆ ಶ್ರೀರಾಮಸೇನೆ ಪುಂಡರು ನಡೆಸಿರುವ ಗೂಂಡಾಗಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಾಪದ ಫಲ. ಮುಖ್ಯಮಂತ್ರಿಗಳು ಇನ್ನೂ ಅಧಿಕಾರದಲ್ಲಿರುವುದು ಸತ್ಯವಾದರೆ ಪುಂಡರನ್ನು ತಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಕುರ್ಚಿಯ ಮಾನ ಉಳಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ. ಬೀದಿ ಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ಪ್ರಾರಂಭವಾಗಿದೆ. ಇದರಿಂದ ಕಾನೂನು ಸುವ್ಯವಸ್ಥೆಯೇ ಕುಸಿದು ಬಿದ್ದು ನಾಗರಿಕ ಯುದ್ಧಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹೀಗೇ ಬಿಟ್ಟರೆ ಬಾಗಿಲು ತಟ್ಟುತ್ತಾರೆ:
ಬೆಂಗಳೂರಿನಲ್ಲಿ(Bengaluru) ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೇಳಿಕೊಂಡು ಬರುತ್ತಿರುವ ರಾಮ ರಾಜ್ಯದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ? ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಂ ವ್ಯಾಪಾರಿಗಳ(Muslim Traders) ಮೇಲೆ ನಡೆದದ್ದಲ್ಲ, ಕಲ್ಲಂಗಡಿ ಬೆಳೆಯುವ ರೈತರ ಮೇಲೆ ಕೂಡ ನಡೆದಿರುವ ದೌರ್ಜನ್ಯ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ ಎಂದು ಎಚ್ಚರಿಸಿದರು
ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ. ಇದರಿಂದಾಗಿಯೇ ಸರ್ಕಾರವನ್ನು ಸಂಘ ಪರಿವಾರಕ್ಕೆ ಹೊರಗುತ್ತಿಗೆ ನೀಡಿ ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ ಎಂದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಕನಸು ಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗೆ ತಿಳಿದಿಲ್ಲ ಎಂದರು.
ಸಿಎಂ ಮೂಕ ಬಸವಣ್ಣರಾಗಿದ್ದಾರೆ:
ಬೊಮ್ಮಾಯಿ ಅವರು ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಸಿ.ಟಿ. ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟುಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ. ಈ ಪುಂಡಾಟಿಕೆಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು ಎಂದು ಎಚ್ಚರಿಕೆ ನೀಡಿದರು.
Karnataka Politics: ಅಲ್ ಖೈದಾ ಮತ್ತು ಕಾಂಗ್ರೆಸ್ ಒಂದೇ ಕಡೆ ಬ್ಯಾಟಿಂಗ್: ಸಿ.ಟಿ.ರವಿ
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಭ್ಯರ್ಥಿ ಆಯ್ಕೆ ಮಾಡಲು ಹೈಕಮಾಂಡ್ ಮೂರು ತಂಡಗಳನ್ನು ರಚಿಸಿದೆ. ಹಾಲಿ ಶಾಸಕರ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣ ಹಾಗೂ ಜನಪ್ರಿಯತೆಯ ಮಾನದಂಡಗಳನ್ನು ನಿಗದಿ ಮಾಡಿದ್ದು, ಈ ಪರೀಕ್ಷೆಯಲ್ಲಿ ಬಿಜೆಪಿಯ ಯಾವೊಬ್ಬ ಹಾಲಿ ಶಾಸಕರಾದರೂ ಪಾಸಾಗಲು ಸಾಧ್ಯವೇ? ಈ ಮಾನದಂಡ ನೋಡಿದರೆ ಬಿಜೆಪಿಗೆ ಅಭ್ಯರ್ಥಿಗಳ ವಿಚಾರದಲ್ಲಿ ತೀವ್ರ ತತ್ವಾರ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು ಸಚಿವರ ಕಾರ್ಯ ನಿರ್ವಹಣೆ, ಸುಧಾರಣೆ ಹಾಗೂ ಬದಲಾವಣೆಗಳ ಮಾನದಂಡದಡಿ ಟಿಕೆಟ್ ನೀಡಲಿದೆಯಂತೆ. ಈ ಮಾನದಂಡದ ಪ್ರಕಾರ ಸಚಿವರು ಮಾತ್ರವಲ್ಲ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಟಿಕೆಟ್ ಕಳೆದುಕೊಳ್ಳುವ ಅಪಾಯವಿದೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಶಾಸಕರಿಗೆ ಕಾರ್ಯವೈಖರಿ, ಜನರ ಸಮಸ್ಯೆಗೆ ಸ್ಪಂದಿಸುವ ಗುಣದ ಬದಲು ಶೇ.40ಕ್ಕಿಂತ ಹೆಚ್ಚು ಕಮಿಷನ್ ಪಡೆದವರು, ಹಿಜಾಬ್, ಹಲಾಲ್, ಮೊದಲಾದ ವಿವಾದಗಳಿಂದ ಸಮಾಜದಲ್ಲಿ ಹೆಚ್ಚು ವೈಷಮ್ಯವನ್ನು ಹುಟ್ಟಿಸಿದವರು ಮತ್ತು ಅತೀ ಹೆಚ್ಚು ಸುಳ್ಳು ಹೇಳಿದವರು ಯಾರು? ಎಂಬ ಮಾನದಂಡಗಳನ್ನು ನಿಗದಿಪಡಿಸಿದರೆ ಬಿಜೆಪಿಯ ಹಾಲಿ ಶಾಸಕರಿಗೆಲ್ಲರಿಗೂ ಟಿಕೆಟ್ ಖಚಿತ ಎಂದು ಲೇವಡಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.