
ಬೆಂಗಳೂರು(ಮೇ.28): ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಕಾಶ ಮತ್ತು ಭೂಮಿಗೆ ಇರುವಷ್ಟು ವ್ಯತ್ಯಾಸವಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾರ್ಮಿಕವಾಗಿ ಹೇಳಿದ್ದಾರೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜವಾಹರ್ ಲಾಲ್ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮ ನೆಹರು ಅವರ ಆಲೋಚನೆಯಾಗಿತ್ತು ಅಂತ ತಿಳಿಸಿದ್ದಾರೆ.
'ಹೊರಗಿನಿಂದ ಬಂದವರು... 'ಆರೆಸ್ಸೆಸ್ ಮೂಲ ಕೆದಕಿದ ಸಿದ್ದರಾಮಯ್ಯ
ನೆಹರು ಅವರು ವಿಜ್ಞಾನ-ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ಆಧಾರದಲ್ಲಿ ದೇಶವನ್ನು ಕಟ್ಟಿ ನಿಲ್ಲಿಸಿದರು. ಅಲ್ಲದೆ, ಪ್ರಜಾಪ್ರಭುತ್ವದ ಬೇರುಗಳು ದೇಶದಲ್ಲಿ ಆಳವಾಗಿ ಬೇರೂರಲು ಬೇಕಾದ ಎಲ್ಲ ಕ್ರಮ ಕೈಗೊಂಡರು. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಇದಕ್ಕೆಲ್ಲಾ ತದ್ವಿರುದ್ಧ. ಇವರು ಪ್ರಧಾನಿ ಆದ ಬಳಿಕ ಒಂದೇ ಒಂದು ಸಂಸ್ಥೆಯನ್ನೂ ಕಟ್ಟಿಬೆಳೆಸಿಲ್ಲ. ನೆಹರು ಅವರು ಕಟ್ಟಿದ ತಾಂತ್ರಿಕ-ವೈಜ್ಞಾನಿಕ-ಶೈಕ್ಷಣಿಕ ಸಂಸ್ಥೆಗಳ ಹೆಸರನ್ನು ಹಾಳು ಮಾಡಲು ಹಗಲೂ ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.