ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

Published : Apr 03, 2026, 11:51 PM IST
siddaramaiah

ಸಾರಾಂಶ

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಬಾಗಲಕೋಟೆ (ಏ.03): ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ವೇಳೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಯನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ.

ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಬಿಜೆಪಿ ಸೋಲುತ್ತದೆ ಎಂದು ಗೊತ್ತಾಗಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುವುದಿಲ್ಲ. ಹೀಗಾಗಿ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ ಯತ್ನಾಳ ಅವರನ್ನೇ ಗೊಗರೆದು ಕರೆತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದ ಅವರು, ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.

ಲೋಕಸಭಾ ಸ್ಥಾನ ಹೆಚ್ಚಿಸುವುದರಿಂದ ರಾಜ್ಯಕ್ಕಾಗುವ ಲಾಭವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜನಸಂಖ್ಯೆಗೆ ಅನುಗುಣವಾಗಿ ಸ್ಥಾನ ಹೆಚ್ಚಿಸಬೇಕು. ಆದರೆ ಮಲತಾಯಿ ಧೋರಣೆ ಮಾಡಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿ, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿರುವುದಕ್ಕೆ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದರು.

ಎರಡೂ ಕಡೆ ಗೆಲುವು ನಮ್ಮದೆ

ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಯತ್ನಾಳ ಆರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ? ಅವರ ಜನಸಂಖ್ಯೆ ಶೇ.14ರಷ್ಟಿದ್ದು ಎಲ್ಲರಿಗೂ ಅನುದಾನ ನೀಡಿದಂತೆ ಅವರಿಗೂ ನೀಡಲಾಗಿದೆ ಎಂದರು. ಅಧಿಕಾರ ಮತ್ತು ಹಣದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಹಾಗೇನಾದರೂ ಹಣ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದರೆ ಅದು ಬಿಜೆಪಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ: ಶಾಸಕ ಯತ್ನಾಳ ವಾಗ್ದಾಳಿ
ಬಿಜೆಪಿಗರಿಗೆ ಧೈರ್ಯ ಇದ್ದರೆ ಹಿಂದಿ ಜಾರಿ ಮಾಡ್ತೇವೆ ಎನ್ನಲಿ: ಸಚಿವ ಮಧು ಬಂಗಾರಪ್ಪ ಸವಾಲು