
ತೀರ್ಥಹಳ್ಳಿ(ಜೂ.16): ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡುವುದು ಬಿಜೆಪಿ ಷಡ್ಯಂತ್ರ. ರಾಜಕೀಯ ದುರುದ್ದೇಶದಿಂದ ಈ ರೀತಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ತೀರ್ಥಹಳ್ಳಿಯ ಜ್ಯೂನಿಯರ್ ಕಾಲೇಜಿನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಈ ಹಿಂದೆಯೇ ತನಿಖೆ ಮಾಡಿ, ರಿಪೋರ್ಚ್ ಹಾಕಿದ್ದರು. ನ್ಯಾಷನಲ್ ಹೆರಾಲ್ಡ… ಪತ್ರಿಕೆ 1938ರಲ್ಲಿ ನೆಹರೂ ಪ್ರಾರಂಭ ಮಾಡಿದ್ದು. ಅದರಲ್ಲಿ ಈ ಹಿಂದೆ ರಾಜೀವ್ ಗಾಂಧಿ, ಈಗ ಸೋನಿಯಾ ಹಾಗೂ ರಾಹುಲ್ ಎಲ್ಲರೂ ಟ್ರಸ್ಟಿಗಳಾಗಿದ್ದಾರೆ. ವಿಚಾರಣೆಯಲ್ಲಿ ಇರೋದು ಕೇವಲ ರಾಜಕೀಯ ದುರುದ್ದೇಶ ಅಷ್ಟೇ. ಅವರ ರಾಜಕೀಯ ವರ್ಚಸ್ಸು ಕಡಿಮೆ ಮಾಡಲು ಹೀಗೆ ಮಾಡುತ್ತಿದ್ದಾರೆ. ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹಮಂತ್ರಿಗಳ ಅಧೀನಕ್ಕೆ ಬರುತ್ತಾರೆ. ಹೀಗಾಗಿ, ಪ್ರತಿಭಟನಾನಿರತರನ್ನು ಪೊಲೀಸರ ಮೂಲಕ ಕೇಂದ್ರ ಸರ್ಕಾರ ಅರೆಸ್ಟ್ ಮಾಡಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯಸಭಾ ಚುನಾವಣೆ: ಬಿಜೆಪಿ 3ನೇ ಅಭ್ಯರ್ಥಿ ಗೆಲುವಿಗೆ ಸಿದ್ದರಾಮಯ್ಯ ಕಾರಣ, ಈಶ್ವರಪ್ಪ
ಡಿ.ಕೆ.ಸುರೇಶ್ ಅವರು ಸಂಸದರು. ಜೊತೆಗೆ ದಿನೇಶ್ ಗುಂಡೂರಾವ್ ಸಚಿವರಾಗಿದ್ದವರು. ಪೊಲೀಸರಿಂದ ಮ್ಯಾನ್ ಹ್ಯಾಂಡಲ್ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶ ಮಾಡುತ್ತಿದ್ದು, ಹಕ್ಕುಗಳನ್ನು ಹತ್ತಿಕ್ಕುತ್ತಿದೆ. ಕಾನೂನು ಪ್ರಕಾರ ವಿಚಾರಣೆ ಮಾಡಲು ನನ್ನ ಅಡ್ಡಿಯಿಲ್ಲ. ರಾಜಕೀಯ ಯಾಕೆ..? ದೇಶದಲ್ಲಿ ಆಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಇವರುಗಳೇ ಈ ಹಿಂದೆ ತುರ್ತು ಪರಿಸ್ಥಿತಿಯ ವಿರುದ್ದ ಹೋರಾಟ ಮಾಡಿದ್ದರು. ಇಡಿ, ಐಟಿ ಎಲ್ಲವೂ ಇಂದು ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ. ಸ್ವತಂತ್ರ ಸಂಸ್ಥೆ ಕೈಗೊಂಬೆಯಾಗಿ ಕೆಲಸ ಮಾಡಬಾರದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.