ಹೈಕೋರ್ಟ್ ನಿರ್ದೇಶನದಂತೆ ಸಮೀಕ್ಷೆ ಮಾಡ್ತೇವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Published : Sep 28, 2025, 01:49 AM IST
CM Siddaramaiah

ಸಾರಾಂಶ

ನ್ಯಾಯಾಲಯದ ನಿರ್ದೇಶನದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆ ಬಹಿಷ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ ನೀಡಿರುವ ಕುರಿತು ಪ್ರತಿಕ್ರಿಯಿಸಿದರು.

ಬೆಂಗಳೂರು (ಸೆ.28): ನ್ಯಾಯಾಲಯದ ನಿರ್ದೇಶನದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆ ಬಹಿಷ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಸಮೀಕ್ಷೆ ತಡೆಯಲು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ, ನ್ಯಾಯಾಲಯ ತಡೆ ನೀಡಿಲ್ಲ. ಈ ಕುರಿತು ನ್ಯಾಯಾಲಯ ನೀಡಿರುವ ನಿರ್ದೇಶನಗಳಂತೆ ಸಮೀಕ್ಷೆ ನಡೆಸಲಾಗುವುದು ಎಂದರು.

ಸಂಸದ ತೇಜಸ್ವಿ ಸೂರ್ಯ ಅವರು ಒದಗಿಸುವ ಮಾಹಿತಿ ಸುರಕ್ಷಿತವಾಗಿರುವ ಬಗ್ಗೆ ನಂಬಿಕೆ ಇಲ್ಲ. ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದು ಐಚ್ಛಿಕ. ಕಡ್ಡಾಯವಲ್ಲ ಎಂದು ಹೈಕೋರ್ಟ್ ಕೂಡ ಹೇಳಿದೆ. ಹೀಗಾಗಿ, ನಾನೂ ಸಮೀಕ್ಷೆಯಲ್ಲಿ ಭಾಗವಹಿಸುತ್ತಿಲ್ಲ. ಸಾರ್ವಜನಿಕರು ಬಹಿಷ್ಕಾರ ಹಾಕಬಹುದು ಎಂದು ಅವರು ಹೇಳಿಕೆ ನೀಡಿದ್ದರು.

ನಾವು ಯಾವತ್ತೂ ಒಳ್ಳೆದೇ ಮಾಡ್ತೇವೆ: ಧರ್ಮಸ್ಥಳ ಗ್ರಾಮ ಪ್ರಕರಣ ಕುರಿತು ಎಸ್‌ಐಟಿ ತನಿಖೆ ಕ್ರಮವನ್ನು ಸ್ವಾಗತಿಸಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ನಾವು ಯಾವಾಗಲೂ ಒಳ್ಳೆಯದೇ ಮಾಡುತ್ತೇವೆ’ ಎಂದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ನಾವು ಯಾವಾಗಲೂ ಒಳ್ಳೆಯದೇ ಮಾಡುತ್ತೇವೆ. ಅದು ಬಿಟ್ಟು ಬೇರೆ ಏನೂ ಮಾಡಲ್ಲ’ ಎಂದಷ್ಟೇ ಹೇಳಿದರು.

ಕಾಂಗ್ರೆಸ್‌ ತೊಂದ್ರೆ ನೀಡಲ್ಲ

ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದು, ಧರ್ಮಸ್ಥಳ ಗ್ರಾಮ ಪ್ರಕರಣದಲ್ಲಿ ಕಾಂಗ್ರೆಸ್‌ ಸರ್ಕಾರ ಯಾವತ್ತೂ ಯಾರಿಗೂ ತೊಂದರೆ ನೀಡಿಲ್ಲ. ನಮ್ಮ ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ತಪ್ಪು ಮಾಡಿದವರಿಗೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಇವತ್ತಿನವರೆಗೂ ನಾವು ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅಧಿಕಾರಿಗಳ ಬಳಿ ಮಾಹಿತಿ ಕೇಳಿಲ್ಲ. ಇಷ್ಟು ದಿನಗಳ ಕಾಲ ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ನಾವು ಮಾತಾಡಿದ್ದೇವೆ. ಮುಂದೆ ಅಂತಿಮ ವರದಿ ಬರಲಿ, ನಂತರ ಮಾತಾಡೋಣ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ