
ಮೈಸೂರು, (ಜ.17): ಜಿಲ್ಲೆಯ ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಧರಣಿ 57ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಕೊಡಿ ಇಲ್ಲವೇ ಭೂಮಿ ವಾಪಸ್ ಕೊಡಿ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
"
ಈ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದ್ದು, ನೀವು ನಡೆಸುವ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಸ್ಪಷ್ಟಪಡಿಸಿದರು.
'ಗೋ ಮಾಂಸ ತಿನ್ನುವ ಸಿದ್ದರಾಮಯ್ಯ ಜತೆಗೆ ಆರ್‌ಎಸ್‌ಎಸ್ ನಾಯಕರು ಮಾತಾಡಲ್ಲ'
ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದರು.
ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಉದ್ಯೋಗ ಕೊಡದಿದ್ದರೆ ನಾನು ಮಧ್ಯಪ್ರವೇಶ ಮಾಡುತ್ತೇನೆ. ನಿಮ್ಮ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.