
ವರದಿ : ನಂದನ್ ರಾಮಕೃಷ್ಣ, ಏಷ್ಯಾನೆಟ್ ಸುವರ್ಣ ನ್ಯೂಸ್
ಬೆಂಗಳೂರು (ಜ.13) : ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಕೊನೆಗೂ ತೆರೆಬಿದ್ದಿದೆ. ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸೋದಾಗಿ ಸ್ವತಃ ಸಿದ್ದರಾಮಯ್ಯ ಅವರೇ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಕುಲದೇವತೆ ಮಹತ್ವದ ಸೂಚನೆಯೊಂದನ್ನ ರವಾನಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ನಿಲ್ಲುವಂತೆ ಹೇಳಿದ್ದಾರೆ.
ಮಂಡ್ಯದ ಮಳವಳ್ಳಿ ವಿಧಾನಸಭಾ ಕ್ಷೇತ್ರ()Malavalli Assembly Constituency( ಪ್ರವಾಸ ವೇಳೆ ತಾಲೂಕಿನ ಚೊಟ್ಟನಹಳ್ಳಿ(chottanahalli) ಗ್ರಾಮದಲ್ಲಿರುವ ತಮ್ಮ ಮನೆದೇವರು ಆದಿನಾಡು ಚಿಕ್ಕಮ್ಮದೇವಿ ದೇವಾಲಯ(aadinadu chikkammadevi temple)ಕ್ಕೆ ಮಾಜಿಸಚಿವ ನರೇಂದ್ರ ಸ್ವಾಮಿ(Narendraswamy) ಜೊತೆಗೆ ಸಿದ್ದು ಪುತ್ರ ಡಾ ಯತೀಂದ್ರ(Dr Yateendra) ಭೇಟಿ ನೀಡಿ ದೇವರ ದರ್ಶನ ಪಡೆದರು. ಪೂಜೆ ಸಲ್ಲಿಸುವ ವೇಳೆ ದೇವಾಲಯದ ಅರ್ಚಕ ಡಾ. ಲಿಂಗಣ್ಣ(Dr Linganna) ಮೈ ಮೇಲೆ ಬಂದ ಶಕ್ತಿ ದೇವತೆ, ಯತೀಂದ್ರ ಅವರಿಗೆ ತಂದೆಯ ರಾಜಕೀಯ ಬಗ್ಗೆ ಭವಿಷ್ಯ ನುಡಿಯಿತು.
Karnataka Assembly election: ಕೋಲಾರದಿಂದಲೇ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಅಧಿಕೃತ ಘೋಷಣೆ
ಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ ನೀಡಿದರು. ನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ. ಒಂದು ಕಡೆ ಬಾಹುಬಲ ಚಾಚಿದ್ರೆ ಆಗಲ್ಲ. ಅರ್ಥ ಆಯ್ತೇನಪ್ಪ. ಬಾಹುಬಲ ಎರಡು ಕಡೆ ಚಾಚಬೇಕು. ಒಂದು ಕಡೆ ಚಾಚಿದ್ರೆ ತಪ್ಪಾಗುತ್ತೆ, ಅರ್ಥ ಮಾಡ್ಕೊಳ್ಳಿ. ಎರಡು ಕಡೆ ಚಾಚಿದ್ರೆ ನಾನು ಗೆಲ್ಲಿಸಿಕೊಂಡು ಬರ್ತಿನಿ ಎಂದು ನುಡಿದ ದೇವರು. ನಾನು ನಿಮ್ಮ ಮನೆ ದೇವತೆ ಗೊತ್ತಾ. ನಾನು ಮೂಲದೇವರು, ಬೇಕಾದ್ರೆ ಅವಕಾಶ ಸಿಕ್ಕಿದ್ರೆ ಯಾವಾಗಾದ್ರು ಬಂದು ನನ್ನ ಆಶೀರ್ವಾದ ತೆಗೆದುಕೊಂಡು ಹೋಗಲು ಹೇಳು ಎಂದು ಯತೀಂದ್ರ ಅವರಿಗೆ ದೇವಿ ಹೇಳಿದ್ದಾರೆ.
ಸಿದ್ದರಾಮಯ್ಯ ಬ್ಯಾಲೆನ್ಸ್ ಕಳೆದುಕೊಂಡು ಏನೇನೋ ಮಾತನಾಡ್ತಿದ್ದಾರೆ: ಕೇಂದ್ರ ಸಚಿವ ಜೋಶಿ
ಮೂಲ ಮನೆ ದೇವರ ಸೂಚನೆಯಂತೆ ಎರಡು ಕ್ಷೇತ್ರದಲ್ಲಿ ನಿಲ್ತಾರಾ ಸಿದ್ದು?
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿದ್ರು. ಚಾಮುಂಡೇಶ್ವರಿ(Chamundeshwari) ಹಾಗೂ ಬಾದಾಮಿ(badami) ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದು, ಬಾದಾಮಿಯಲ್ಲಿ ಗೆಲುವು ಸಾಧಿಸಿದರು. ಆದರೆ ಈ ಬಾರಿ ಎರಡು ಕ್ಷೇತ್ರಗಳಿಂದ ದೂರ ಉಳಿದು ಹೊಸ ಕ್ಷೇತ್ರಕ್ಕೆ ಕಾಲಿಟ್ಟಿರುವ ಅವರು ಕೋಲಾರ(Kolar) ಆಯ್ಕೆ ಮಾಡಿಕೊಂಡಿದ್ದಾರೆ. ಈ ಮಧ್ಯೆ ಕುಲದೇವತೆ ಆದಿನಾಡು ಚಿಕ್ಕಮ್ಮ ತಾಯಿ ಎರಡು ಕ್ಷೇತ್ರಗಳಲ್ಲಿ ನಿಲ್ಲುವಂತೆ ಪುತ್ರ ಯತೀಂದ್ರ ಮೂಲಕ ಮಹತ್ವದ ಸೂಚನೆ ರವಾನಿಸಿದ್ದು, ದೇವಿಯ ಸೂಚನೆಯಂತೆ ಚುನಾವಣೆಗೆ ಮೊದಲು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸ್ತಾರಾ, ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸ್ತಾರ ಅನ್ನೋದು ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.