ನನ್ನ ಸರ್ಕಾರದ ಸಾಧನೆ ಜನರಿಗೆ ತಿಳಿಸಿದರೆ ಕಾಂಗ್ರೆಸ್‌ಗೆ ಗೆಲುವು: ಸಿದ್ದರಾಮಯ್ಯ

Kannadaprabha News   | Asianet News
Published : Sep 27, 2021, 08:00 AM IST
ನನ್ನ ಸರ್ಕಾರದ ಸಾಧನೆ ಜನರಿಗೆ ತಿಳಿಸಿದರೆ ಕಾಂಗ್ರೆಸ್‌ಗೆ ಗೆಲುವು: ಸಿದ್ದರಾಮಯ್ಯ

ಸಾರಾಂಶ

*  ಗುಂಪುಗಾರಿಕೆ ಬಿಡಿ, ಯಾರಿಗೇ ಟಿಕೆಟ್‌ ಕೊಟ್ಟರೂ ಗೆಲ್ಲಿಸಿ *  ಗಾಂಧಿ ಹಾದಿಯಲ್ಲಿ ಸಾಗಬೇಕು *  ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಇನ್ನೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಬೇಕಿದೆ   

ಬೆಂಗಳೂರು(ಸೆ.27): ಪಕ್ಷದೊಳಗೆ ಗುಂಪುಗಾರಿಕೆಯನ್ನು ಬಿಟ್ಟು, ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರೆ ಕಾಂಗ್ರೆಸ್ಸಿಗೆ ಹಿನ್ನಡೆಯಿರುವುದಿಲ್ಲ. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈ ದಿಸೆಯಲ್ಲಿ ಕಾರ್ಯತತ್ಪರರಾಗಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕರೆ ನೀಡಿದ್ದಾರೆ.

ಬೆಂಗಳೂರು(Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆ ಗೇಟ್‌ನಲ್ಲಿರುವ ಎಸ್‌ಬಿಎಸ್‌ ಕನ್ವೆನ್ಷನ್‌ ಹಾಲ್‌ನಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜಿಸಿದ್ದ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನನ್ನ ಅವಧಿಯ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನದಟ್ಟು ಮಾಡಿಕೊಟ್ಟಿದ್ದರೆ ನಾವು ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಬರುತ್ತಿರಲಿಲ್ಲ. ಈ ಕ್ಷೇತ್ರದಲ್ಲಿ ವೀರಪ್ಪ ಮೊಯ್ಲಿ ಅವರು ಸೋಲುತ್ತಲೂ ಇರಲಿಲ್ಲ. ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿವೆ. ಅವುಗಳನ್ನು ಉಳಿಸಿ, ರಕ್ಷಣೆ ಮಾಡಬೇಕಾದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದರು.

'2023ಕ್ಕೆ ಕಾಂಗ್ರೆಸ್‌ಗೆ ಅಧಿಕಾರ : ಸಿದ್ದರಾಮಯ್ಯಗೆ ಸಿಎಂ ಪಟ್ಟ'

ಕಾಂಗ್ರೆಸ್‌(Congress) ಪಕ್ಷದ ಕಾರ್ಯಕರ್ತರು ಇನ್ನೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಬಿಜೆಪಿ ಈ ದೇಶದ ಬಡವರು, ದಲಿತರು, ರೈತರು, ಮಹಿಳೆಯರು, ಕಾರ್ಮಿಕರು ಮತ್ತು ಯುವಕರ ವಿರೋಧಿಯಾಗಿದೆ. ದೇಶದಲ್ಲಿ ಬಿಜೆಪಿಗರು(BJP) ಅಧಿಕಾರಕ್ಕೆ ಬರುವ ಮುನ್ನ ಯುವಜನತೆಯಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಮಾಡುವುದಾಗಿ ಭ್ರಮೆ ಹುಟ್ಟಿಸಿದರು. ಈಗ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನಷ್ಟವಾಗಿದೆ. 11 ಕೋಟಿ ಉದ್ಯೋಗ ಕಿತ್ತುಕೊಂಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಬೆಲೆಗಳ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನಮೋಹನ್‌ ಸಿಂಗ್‌ ಸರ್ಕಾರದ ಅವಧಿಯಲ್ಲಿ .414 ಇದ್ದ ಸಿಲಿಂಡರ್‌ ಬೆಲೆ ಇಂದು .950ಕ್ಕೆ ತಲುಪಿದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ .53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತವನ್ನು .135 ಲಕ್ಷ ಕೋಟಿಗೆ ಏರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಖಾಸಗೀಕರಣಕ್ಕೆ ಮುನ್ನುಡಿ:

ರೈಲ್ವೆ, ವಿಮಾನಯಾನ ಸೇರಿದಂತೆ ಬಹುತೇಕ ಎಲ್ಲವನ್ನೂ ಖಾಸಗೀಕರಣ(Privatization) ಮಾಡಿದ್ದಾರೆ. ಇನ್ನು ಉಳಿಸಿರುವುದು ಲೋಕಸಭೆ ಮಾತ್ರ. ಅದನ್ನೂ ಖಾಸಗಿಯವರಿಗೆ ಮಾರಾಟ ಮಾಡಿದರೂ ಅಚ್ಚರಿಪಡಬೇಕಾಗಿಲ್ಲ. ಪಕ್ಷದಲ್ಲಿನ ಗುಂಪುಗಾರಿಕೆಯನ್ನು ಬಿಟ್ಟು, ನಮ್ಮ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿನ ಜನಪರವಾದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು, ಪಕ್ಷದಿಂದ ಯಾರಿಗೆ ಟಿಕೆಟ್‌ ನೀಡಿದರೂ ಒಗ್ಗಟ್ಟಿನಿಂದ ಕೆಲಸ ಮಾಡಿ, ಗೆಲ್ಲಿಸಿಕೊಂಡು ಬಂದರೆ ನಾವು ಸಂವಿಧಾನ ಉಳಿಸಲಿಕ್ಕೆ ಸಾಧ್ಯವಾಗುತ್ತದೆ ಎಂದರು.

ಅಡ್ವಾಣಿ ಅಂತವರು ನಿಭಾಯಿಸಿರುವ ಖಾತೆ ಅದು: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಿದ್ದು ಪಾಠ

ಗಾಂಧಿ ಹಾದಿಯಲ್ಲಿ ಸಾಗಬೇಕು:

ಮಾಜಿ ಸಂಸದ ಎಂ.ವೀರಪ್ಪ ಮೊಯ್ಲಿ ಮಾತನಾಡಿ, ನಾವು ಗಾಂಧೀಜಿ ಅವರ ಹಾದಿಯಲ್ಲಿ ಸಾಗಬೇಕು. ನಮ್ಮ ಪಕ್ಷವನ್ನು ಸದೃಢವಾಗಿ ಕಟ್ಟಬೇಕಾದರೆ ಪಕ್ಷದ ಹುಟ್ಟಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿರುವ ಅನಿವಾರ್ಯತೆ ಇದೆ. ಹಾಗಾಗಿ ಗಾಂಧಿ ನಡಿಗೆ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದ್ದೇವೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಬೇಕು ಎಂದರು.

ಕಾಂಗ್ರೆಸ್‌ ನಾಯಕ ರೆಹಮಾನ್‌ ಖಾನ್‌, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್‌, ರಾಜೀವ್‌ ಗೌಡ, ಬಿ.ಎಲ್‌.ಶಂಕರ್‌, ವಿಧಾನಪರಿಷತ್‌ ಸದಸ್ಯ ಎಸ್‌.ರವಿ ಸೇರಿದಂತೆ ಹಲವಾರು ನಾಯಕರು ಕಾಂಗ್ರೆಸ್‌ ಹಾಗೂ ಗಾಂಧೀಜಿ ಕುರಿತು ಮಾತನಾಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ