ಆಡಿಯೋ ಬಾಂಬ್: ಒಂದೇ ಕಲ್ಲಿನಿಂದ ಎರಡು ಹಕ್ಕಿ ಉರುಳಿಸಲು ಸಿದ್ದು ತಂತ್ರ?

By Web Desk  |  First Published Feb 14, 2019, 11:48 AM IST

ಆಡಿಯೋ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಎಸ್‌ಐಟಿ ತನಿಖೆಯನ್ನೇ ನಡೆಸಬೇಕೆಂದು ಪಟ್ಟು ಹಿಡಿದಿದ್ದಾರೆ. ಅಷ್ಟಕ್ಕೂ ಈ ಹಠ್ಕಕೆ ಕಾರಣವೇನಿರಬಹುದು? ಇಲ್ಲಿದೆ ವಿವರ


ಬೆಂಗಳೂರು[ಫೆ.14]: ಆಡಿಯೋ ಪ್ರಕರಣದ ತನಿಖೆಯನ್ನು ಎಸ್‌ಐಟಿಯೇ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿಯಲು ಕಾರಣ ಏನಿರಬಹುದು ಎಂಬುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಒಂದೇ ಕಲ್ಲಿನಿಂದ ಎರಡು ಹಕ್ಕಿಗಳನ್ನು ಹೊಡೆದುರುಳಿಸುವ ತಂತ್ರ ಅಡಗಿದೆ ಎಂಬ ಮಾತು ರಾಜ್ಯ ರಾಜಕಾರಣದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಈ ಆಡಿಯೋ ಪ್ರಕರಣವನ್ನು ಬಹಿರಂಗಪಡಿಸಿದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ. ಅದೂ ತಮ್ಮ ಗೃಹ ಕಚೇರಿಯಲ್ಲಿ. ಅದರಲ್ಲಿ ಇದ್ದುದು ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರದ್ದೆನ್ನಲಾದ ಧ್ವನಿ. ಎಸ್‌ಐಟಿ ತನಿಖೆ ನಡೆದಲ್ಲಿ ಯಡಿಯೂರಪ್ಪ ಅವರೊಂದಿಗೆ ಕುಮಾರಸ್ವಾಮಿ ಅವರನ್ನೂ ವಿಚಾರಣೆಗೆ ಕರೆಸಬೇಕಾಗುತ್ತದೆ.

Latest Videos

ಇದೆಲ್ಲವೂ ಮುಂದೆ ನ್ಯಾಯಾಲಯದಲ್ಲಿ ಪ್ರಸ್ತಾಪವಾಗಲಿದೆ. ಭವಿಷ್ಯದಲ್ಲಿ ರಾಜಕೀಯವಾಗಿ ತಮ್ಮ ಪ್ರತಿಸ್ಪರ್ಧಿಗಳಾದ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬರನ್ನೂ ಹಣಿಯಲು ಇದು ಅಸ್ತ್ರವಾಗಬಹುದು ಎಂಬ ಲೆಕ್ಕಾಚಾರವಿದೆ ಎನ್ನಲಾಗುತ್ತಿದೆ.

click me!