Siddaramaiah: ಸರ್ವ ಸಮುದಾಯದ ನಾಯಕ ಸಿದ್ದರಾಮಯ್ಯ - ಸಚಿವ ಈಶ್ವರ್ ಖಂಡ್ರೆ

Kannadaprabha News   | Kannada Prabha
Published : May 29, 2026, 09:47 AM IST
Siddaramaiah the leader of all communities says Minister Ishwar Khandre

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಸಚಿವ ಈಶ್ವರ ಖಂಡ್ರೆ ಶ್ಲಾಘಿಸಿದ್ದಾರೆ. ಅನ್ನಭಾಗ್ಯ, ಪಂಚ ಗ್ಯಾರಂಟಿಗಳಂತಹ ಯೋಜನೆಗಳು, ಬಸವತತ್ವಕ್ಕೆ ನೀಡಿದ ಕೊಡುಗೆ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅವರ ಬದ್ಧತೆಯನ್ನು ಈ ಲೇಖನ ವಿವರಿಸುತ್ತದೆ.

- ಈಶ್ವರ ಬಿ.ಖಂಡ್ರೆ, ಸಚಿವರು.

ಬುದ್ಧ-ಬಸವ-ಅಂಬೇಡ್ಕರ್ ವಾದಿ ಸಿದ್ದರಾಮಯ್ಯನವರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಮೇರು ನಾಯಕರು. 2013ರಲ್ಲಿ ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದೂ ಬಸವ ಜಯಂತಿ ದಿನದಂದೇ. ರೈತರ ಸಾಲಮನ್ನಾ, ಅನ್ನಭಾಗ್ಯ, ಕ್ಷೀರಭಾಗ್ಯ... ಮೊದಲಾದ ಹಲವು ಯಶಸ್ವಿ ಯೋಜನೆಗಳ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸರ್ವಜನ ಹಿತಕ್ಕಾಗಿ ಶ್ರಮಿಸಿದ ಸಿದ್ದರಾಮಯ್ಯ ಅವರು, ನಮಗೆ ಮಾರ್ಗದರ್ಶಕರಾಗಿ ನೀಡಿದ ಸಲಹೆಗಳು ಅಮೂಲ್ಯ.

17 ಬಜೆಟ್‌ಗಳನ್ನು ಮಂಡಿಸಿದ ಅಪರೂಪದ ನಾಯಕ

ರಾಜ್ಯದ ಇತಿಹಾಸದಲ್ಲೇ ದಾಖಲೆಯ 17 ಬಜೆಟ್‌ಗಳನ್ನು ಮಂಡಿಸಿದ ಅಪರೂಪದ ಸಾಧನೆಯೊಂದಿಗೆ 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅತಿ ದೀರ್ಘಕಾಲ ಆಡಳಿತ ನಡೆಸಿದ ಕರುನಾಡ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯ ಜೊತೆಗೆ, ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಸೋಲನ್ನು ಅನುಭವಿಸಿದ ಬಳಿಕ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಕೀರ್ತಿಗೂ ಭಾಜನರಾದವರು.

ಪಂಚ ಗ್ಯಾರಂಟಿಗಳನ್ನ ಯಶಸ್ವಿಯಾಗಿ ಜಾರಿ ಮಾಡಿದ ಕೀರ್ತಿ

ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ಹಿಂದುಳಿದವರು, ನಿರ್ಗತಿಕರು, ಅಲ್ಪಸಂಖ್ಯಾತರು ಹಾಗೂ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಮತ್ತು ಪಕ್ಷ ಘೋಷಿಸಿದ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ಬಡತನ ನಿರ್ಮೂಲನೆಯ ಜೊತೆಗೆ ರಾಜ್ಯವನ್ನು ಪ್ರಗತಿಯ ಪಥದಲ್ಲಿ ತೆಗೆದುಕೊಂಡು ಹೋದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.

ವಿಶ್ವಗುರು ಬಸವಣ್ಣ ಅವರನ್ನು ಕರುನಾಡ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವಂತೆ ನಾವು ನಿಯೋಗ ತೆರಳಿ ಮನವಿ ಮಾಡಿದಾಗ, ಕೂಡಲೇ ಅದಕ್ಕೆ ಸಮ್ಮತಿಸಿ ಅಧಿಕೃತ ಘೋಷಣೆ ಮಾಡಿದ ಸಿದ್ದರಾಮಯ್ಯ ಅವರು, ಬಸವಾದಿ ಶರಣರ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ಅತ್ಯಾಧುನಿಕ ಅನುಭವ ಮಂಟಪ ನಿರ್ಮಾಣಕ್ಕಾಗಿ ಕಳೆದ 3 ವರ್ಷಗಳಲ್ಲಿ 280 ಕೋಟಿ ರೂ.ಬಿಡುಗಡೆ ಮಾಡುವ ಮೂಲಕ ತಮ್ಮ ಬಸವಭಕ್ತಿ ಮೆರೆದಿದ್ದಾರೆ. ಜೊತೆಗೆ, ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5,000 ಕೋಟಿ ರೂ.ಬಜೆಟ್ ಅನುದಾನ ನೀಡಿದ ಸಿದ್ದರಾಮಯ್ಯನವರಿಗೆ ಇಡೀ ಕಲ್ಯಾಣ ಕರ್ನಾಟಕ ಋಣಿಯಾಗಿದೆ.

2013ಕ್ಕೆ ಮುನ್ನ ಪ್ರಬಲ ವಿರೋಧ ಪಕ್ಷದ ನಾಯಕರಾಗಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ ಅವರ ದಿಟ್ಟತನ ಎಲ್ಲರಿಗೂ ಸ್ಫೂರ್ತಿಯಾಗಿತ್ತು. ವಿಧಾನಸಭೆಯಲ್ಲಿ ಸಿದ್ದರಾಮಯ್ಯನವರನ್ನು ಕೆಣಕಿದವರು ಬಹಳ ಕಡಿಮೆ. ಅವರು ಮಾಹಿತಿಯ ಗಣಿಯಾಗಿದ್ದರು. ಅವರ ನೆನಪಿನ ಶಕ್ತಿ ಅಗಾಧ. ಇದು ಪ್ರತಿಪಕ್ಷದವರನ್ನೇ ಪೇಚಿಗೆ ಸಿಲುಕಿಸುತ್ತಿತ್ತು.

ಸುದೀರ್ಘ ಸಮಯ ಮುಖ್ಯಮಂತ್ರಿ ಹುದ್ದೆಯಲ್ಲಿ ಪ್ರಾಮಾಣಿಕವಾಗಿ, ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಕರುನಾಡ ಜನರ ಮನ ಗೆದ್ದ ಜನಪ್ರಿಯ ನಾಯಕ, ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಲ್ಲಿಸಿದ ಸೇವೆ, ಸಾಮಾಜಿಕ ನ್ಯಾಯಕ್ಕಾಗಿ ಅವರು ನಡೆಸಿದ ಹೋರಾಟ ಹಾಗೂ ಜನಪರ ಆಡಳಿತ ಕರ್ನಾಟಕದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾಗಲಿದೆ. ಸಿದ್ದರಾಮಯ್ಯ ಅವರ ಅಮೂಲ್ಯ ಸೇವೆಯನ್ನು ಕರುನಾಡು ಸದಾ ಸ್ಮರಿಸುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

EXCLUSIVE: ದೆಹಲಿ ವಿಮಾನದಲ್ಲೇ ಸಚಿವರ ಪಟ್ಟಿ ಸಿದ್ಧಪಡಿಸಿದ ಡಿ.ಕೆ. ಶಿವಕುಮಾರ್! ಹೈಕಮಾಂಡ್‌ಗೆ ನೀಡಲಿರುವ 'ಡಿಕೆಶಿ ಟೀಮ್'ನಲ್ಲಿ ಯಾರಿದ್ದಾರೆ?
Davanagere: ಪ್ರಧಾನಿ ಮೋದಿಯಿಂದ ದೇಶಕ್ಕೆ ದೊಡ್ಡ ಗಂಡಾಂತರ, ಒಳಿತು ಮಾಡುವುದಿದ್ದರೆ ತಕ್ಷಣ ರಾಜೀನಾಮೆ ಕೊಡಲಿ: ಕಾಂಗ್ರೆಸ್ ಮುಖಂಡ