
ಬೆಂಗಳೂರು : ರಾಜ್ಯ ಸಚಿವ ವಿಸ್ತರಣೆ/ಪುನರ್‌ರಚನೆ ಗುಲ್ಲಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ನವೆಂಬರ್ ಕ್ರಾಂತಿ ವದಂತಿ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ತೆರಳಲಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಈ ಪ್ರವಾಸ ಸಂಪುಟ ಸರ್ಜರಿ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ನ.14ರಂದು ಪ್ರಕಟವಾಗಲಿದ್ದು, ಅದಾದ ಮರುದಿನವೇ ಅಂದರೆ ನ.15ರಂದು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದು, 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆ. ಹಿರಿಯ ನಾಯಕ ಕಪಿಲ್ ಸಿಬಲ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಕಚೇರಿ ಹೇಳುತ್ತದೆ.
ಆದರೆ, ಪುಸ್ತಕ ಬಿಡುಗಡೆಗೆ ತೆರಳಲಿರುವವರು ಮೂರು ದಿನ ಅಲ್ಲೇ ಉಳಿದುಕೊಳ್ಳುವ ಚಿಂತನೆಯನ್ನೂ ಹೊಂದಿರುವುದರಿಂದ ಸಂಪುಟ ವಿಸ್ತರಣೆ ವಿಚಾರದಲ್ಲಿ ಮಹತ್ವದ ಬೆಳವಣಿಗೆ ಈ ಅವಧಿಯಲ್ಲಿ ನಡೆಯಲಿದೆ ಎಂದೇ ಹೇಳಲಾಗುತ್ತಿದೆ.
ಈ ಮೂರು ದಿನಗಳ ಭೇಟಿ ವೇಳೆ ಹೈಕಮಾಂಡ್ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಹೆಚ್ಚಿದೆ. ಈ ವೇಳೆ ಸಂಪುಟ ವಿಸ್ತರಣೆ/ಪುನರ್ ರಚನೆ ಕುರಿತು ಮಹತ್ವದ ಮಾತುಕತೆ ನಡೆಯಲಿದೆ ಎಂದೇ ಮೂಲಗಳು ಹೇಳುತ್ತವೆ.
ಇದೇ ವೇಳೆ ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ನಾಯಕರಿಂದ ಕೇಳಿ ಬಂದಿರುವ ಅನಗತ್ಯ ಹೇಳಿಕೆಗಳ ಬಗ್ಗೆಯೂ ಹೈಕಮಾಂಡ್‌ನೊಂದಿಗೆ ಚರ್ಚಿಸಬಹುದು ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.