ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಭವಿಷ್ಯ ಕೇಳಿರುವುದು ಇದೀಗ ಅಚ್ಚರಿಗೆ ಕಾರಣವಾಗಿದೆ.
ಹಾಸನ (ಮೇ.04): ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರವನ್ನ ಕೈಗೊಂಡಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿಂತೆ ಹಲವು ಪಕ್ಷಗಳು ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಇತ್ತ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಭವಿಷ್ಯ ಕೇಳಿರುವುದು ಇದೀಗ ಅಚ್ಚರಿಗೆ ಕಾರಣವಾಗಿದೆ. ರಾಜಕೀಯ ಭವಿಷ್ಯ ನುಡಿಯೋ ಮೂಲಕ ಖ್ಯಾತರಾಗಿರೊ ಶ್ರೀಗಳಿಂದ ತಮ್ಮ ಭವಿಷ್ಯ ಕೇಳಿದ್ರಾ ಕೈ ನಾಯಕ...? ಕಾಂಗ್ರೆಸ್ ಸರ್ಕಾರ ಬಂದರೆ ಸಿಎಂ ರೇಸ್‌ನಲ್ಲಿ ಸಿದ್ದರಾಮಯ್ಯ ಮುಂಚೂಣಿಯಲ್ಲಿದ್ದಾರೆ.
ಸಿದ್ದರಾಮಯ್ಯ ಭವಿಷ್ಯ ನೋಡಿ ಉಜ್ಚಲ ಭವಿಷ್ಯದ ಶುಭ ಭವಿಷ್ಯಾ ಹೇಳಿದ್ರಾ ಕೋಡಿ ಶ್ರೀಗಳು. ಒಂದು ಗಂಟೆ ಚರ್ಚೆ ಬಳಿಕ ಶ್ರೀಗಳ ಆಶೀರ್ವಾದ ಪಡೆದು ಸಿದ್ದರಾಮಯ್ಯ ಖುಷಿಯಾಗಿ ಹೊರ ಬಂದಿದ್ದಾರೆ. ಸಿದ್ದುಗೆ ಹಾರ ಹಾಕಿ ಸನ್ಮಾನ ಮಾಡಿ ಶುಭ ಹಾರೈಸಿ ಶ್ರೀಗಳು ಕಳುಹಿಸಿದ್ದಾರೆ.ಇನ್ನು ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳಿಂದ ಸಿದ್ದರಾಮಯ್ಯ ಆಶೀರ್ವಾದ ಪಡೆದಿದ್ದು, ಇಂದು ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆ ಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಿದ್ದು ಆಗಮಿಸಿದ್ದಾರೆ. ಸದ್ಯ ಕಾರ್ಯಕ್ರಮ ಮುಗಿಸಿ ಮಠಕ್ಕೆ ಆಗಮಿಸಿ ಊಟ ಮಾಡಿ ಶ್ರೀಗಳ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
undefined
ರಾಜ್ಯ ರಕ್ಷಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಡಿ.ಕೆ.ಶಿವಕುಮಾರ್
14 ಅಥವಾ 15ರಂದು ಸರ್ಕಾರ ರಚನೆ ಮಾಡುತ್ತೇನೆ: ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಹೊರ ಬಂದ ತಕ್ಷಣ ನಾನೇ ಮೇ 14 ಅಥವಾ 15ರಂದು ಸರ್ಕಾರ ರಚನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದರು. ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಪರ ಮತಯಾಚನೆ ಮಾತನಾಡಿ, ನನ್ನ ಮೊದಲ ಶಾಸಕಾಂಗ ಸಭೆಯಲ್ಲೇ ಹಾಲಿಗೆ ಬೆಂಬಲ ಬೆಲೆ ಹಾಗೂ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೂ 10 ಕೆಜಿ ಅಕ್ಕಿ ಘೋಷಣೆ ಮಾಡಲಿದ್ದೇನೆ ಎಂದರು.
ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪಾಸ್ ಜೊತೆಗೆ ಕುಟುಂಬದ ಮುಖ್ಯಸ್ಥ ಮಹಿಳೆಗೆ 2 ಸಾವಿರ ರು. ನಗದು, ಪಧವೀದರರಿಗೆ 3 ಸಾವಿರ ರು. ಡಿಪ್ಲೊಮೋ ವಿದ್ಯಾರ್ಥಿಗಳಿಗೆ 1,500 ಸೇರಿದಂತೆ ಹಲವಾರು ಜನರ ಪರ ಯೋಜನೆ ಜಾರಿಗೊಳಿಸುತ್ತೇನೆ. ಹಾಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ವಿಧಾನಸೌಧದ ಪ್ರತಿ ಕೊಠಡಿಯ ಗೋಡೆಗಳು ಸಹ ಲಂಚ, ಲಂಚ ಎಂದು ಕೂಗುತ್ತಿವೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯಾದ್ಯಂತ 15 ಲಕ್ಷ ಮನೆ ನಿರ್ಮಿಸಿಕೊಟ್ಟಿದ್ದು, ಆದರೆ, ಬಿಜೆಪಿ ಸರ್ಕಾರ ಒಂದು ಮನೆಯನ್ನೂ ಸಹ ಬಡವರಿಗೆ ನಿರ್ಮಿಸಿಕೊಟಿಲ್ಲ ಎಂದು ಕಿಡಿಕಾರಿದರು.
ಶಾಸಕ ಎಸ್.ಆರ್.ವಿಶ್ವನಾಥ್ ಒಬ್ಬ ರೌಡಿ: ಎಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡರಿಗೆ ಮತ ನೀಡುವಂತೆ ಮನವಿ ಮಾಡಿದರು. ಈ ವೇಳೆ ಮಾಜಿ ಸಚಿವ ಚಲುವರಾಯಸ್ವಾಮಿ, ಮಾಜಿ ಶಾಸಕ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ ಸೇರಿದಂತೆ ಇತರರು ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.