ಮೈಸೂರು ಲೋಕಸಭಾ ಕ್ಷೇತ್ರಕ್ಕಾಗಿ ಸಿದ್ದರಾಮಯ್ಯ ಪಟ್ಟು?

Jul 25, 2018, 8:53 PM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಆರಂಭವಾಗಿದೆ. ಮೈಸೂರು ಕ್ಷೇತ್ರ ಕಾಂಗ್ರೆಸ್‌ಗೆ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.